Featured

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ: ಹುಬ್ಬಳಿಯ ಇಬ್ಬರು ಎನ್‌ಐಎ ವಶಕ್ಕೆ -vishwanews24

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ: ಹುಬ್ಬಳಿಯ ಇಬ್ಬರು  ಎನ್‌ಐಎ ವಶಕ್ಕೆ

ಹುಬ್ಬಳ್ಳಿ,: ದಿ ರಾಮೇಶ್ವರ ಕೆಫೆ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ನಿನ್ನೆ ಬೆಂಗಳೂರು ಸೇರಿದಂತೆ 11 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಎನ್‌ಐಎ ಅಧಿಕಾರಿಗಳು ಹುಬ್ಬಳ್ಳಿಯ ಸಹೋದರಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ, ಸಾಫ್ಟ್ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ನನ್ನು ಈ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್ ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್‌ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್‌ಐಎ ಅಧಿಕಾರಿಗಳಿಗೆ ಲಭ್ಯವಾದ ಹಿನ್ನಲೆ ಸಹೋದರರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಸಹೋದರರಿಬ್ಬರು ಹಣ ಸಹಾಯ ಮಾಡಿದ್ದ ಬಗ್ಗೆ ಕೆಲ ಡಿಜಿಟಲ್ ಸಾಕ್ಷ್ಯಗಳು ಎನ್‌ಐಎ ಅಧಿಕಾರಿಗಳಿಗೆ ದೊರೆತಿದೆ. ಹಣ ಸಹಾಯದ ಬಗ್ಗೆ ಸಹೋದರರು ವಿದೇಶಿ ಹ್ಯಾಂಡ್ಲರ್‌ನ ಜೊತೆ ಕೋಡ್ ವರ್ಡ್ನಲ್ಲಿ ಚಾಟಿಂಗ್ ಮಾಡಿದ್ದಾರೆ. ಇನ್ನು ರಾಮೇಶ್ವರಂ ಕೆಫೆ ಸ್ಫೋಟ ಬಳಿಕ ಆರೋಪಿ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿ, ಇಲ್ಲಿ ಹಣ ಪಡೆದು ಪಶ್ಚಿಮ ಬಂಗಾಳಕ್ಕೆ ತೆರಳಿರುವ ಅನುಮಾನ ಅಧಿಕಾರಿಗಳಿಗೆ ಮೂಡಿದೆ. ಹೀಗಾಗಿ ಇವರಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

7 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago