ಡಿಸ್ಪುರ್: ರಾಮ ಜನ್ಮಭೂಮಿ ಕೇವಲ ರಾಜಕೀಯ ವಿಷಯವಲ್ಲ, ಬದಲಾಗಿ ಸಾಂಸ್ಕೃತಿಕ ವಿಷಯವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ತೇಜ್‌ಪುರ ವಿಶ್ವವಿದ್ಯಾನಿಲಯದ 21ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವರಿ 22 ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಅಂದು ಉಪಸ್ಥಿತರಿರುತ್ತಾರೆ ಎಂದರು.
ಇದೇ ವೇಳೆ ರಾಮಮಂದಿರದಿಂದ ಚುನಾವಣಾ ಲಾಭ ಪಡೆಯುವ ಬಗ್ಗೆ ಕೇಳಿದಾಗ, ಇದು ನಮಗೆ ಮತ ಪಡೆಯಲು ರಾಜಕೀಯ ವಿಷಯವಲ್ಲ, ರಾಮಜನ್ಮಭೂಮಿ ನಮಗೆ ಸಾಂಸ್ಕೃತಿಕ ವಿಷಯವಾಗಿದೆ ಎಂದು ಹೇಳಿದರು.
ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 16 ರಿಂದ ಏಳು ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿವೆ. ಅಂತಿಮ ದಿನವಾದ ಜನವರಿ 22 ರಂದು ಬೆಳಗ್ಗಿನ ಪೂಜೆಯ ನಂತರ ಮಧ್ಯಾಹ್ನ ಮೃಗಶಿರಾ ನಕ್ಷತ್ರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ ಎಂದರು.
ಇದೇ ವೇಳೆ ದೇಶದ ಆರ್ಥಿಕತೆಯ ಬಗ್ಗೆ ಮಾತನಾಡಿದ ಸಿಂಗ್, 2047 ರ ವೇಳೆಗೆ ನಾವು ವಿಶ್ವದ ಅತಿದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಲಿದ್ದೇವೆ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…