Featured

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ

ಬೆಂಗಳೂರು: ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮನಸಿಗೆ ಘಾಸಿ ಉಂಟು ಮಾಡಿದೆ. ಯೋಗಿ ಯಾರ ತಪ್ಪನ್ನೂ ಸಹಿಸಲ್ಲ ಎಂದು ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ.

ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮತ್ತು ಬಿಜೆಪಿ – ಆರ್‌ಎಸ್‌ಎಸ್‌ಗೆ ಡೊನೇಷನ್ ಫಸ್ಟ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಮ ಮಂದಿರ ನಿರ್ಮಾಣ ಕಾರ್ಯ 500 ವರ್ಷಗಳ ಶ್ರಮ. ಇದಕ್ಕಾಗಿ ಲಕ್ಷಾಂತರ ಜನ ಪ್ರಾಣ ಕೊಟ್ಟಿದ್ದಾರೆ. 1 ರೂ.ನಿಂದ ಕೋಟಿ ರೂಪಾಯಿ ಡೊನೇಷನ್ ಕೊಟ್ಟಿದ್ದಾರೆ. ಆ ಭಾವನೆಗೆ ಬೆಲೆ ಕಟ್ಟಲು ಆಗಲ್ಲ. ಆ ಭಾವನೆಗೆ ಘಾಸಿ ಆಗಬಾರದು. ಈ ಸುದ್ದಿ ನಮ್ಮ ಮನಸಿಗೆ ಘಾಸಿ ಮಾಡಿದೆ ಎಂದರು.

ಇದನ್ನೂ ಓದಿ: 

ರಾಮ ಮಂದಿರ ವಿರೋಧಿಗಳಿಗೆ ಈಗ ಯಾಕೆ ಸಂಕಟ ಆಗುತ್ತಿದೆ. ಅವರ ಉದ್ದೇಶ ರಾಮ ಮಂದಿರದ ದೇಣಿಗೆ ಕುರಿತು ಅಲ್ಲ. ರಾಮನ ಅಸ್ತಿತ್ವ ಪ್ರಶ್ನೆ ಮಾಡಿದವರು ಇವರು. ರಾಜಕೀಯಕ್ಕೆ ಇದನ್ನ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮಿಸ್ಟರ್ ಪ್ರಿಯಾಂಕ್ ಖರ್ಗೆ ಅವರೇ ಈ ಟ್ರಸ್ಟ್ನಲ್ಲಿ ಬಿಜೆಪಿಯ ಯಾವ ಪದಾಧಿಕಾರಿಗಳೂ ಇರಲಿಲ್ಲ. ರಾಮ ಮಂದಿರಕ್ಕಾಗಿ ನಾವು ಕರ ಸೇವೆಗೆ ಹೋಗಿದ್ವಿ, ಜೈಲಿಗೆ ಹೋಗಿದ್ವಿ. ನೀವು ರಾಮಮಂದಿರ ಆಗಲಿ ಅಂತ ಹೇಳೋಕಾಗದೇ ಹೇಡಿಗಳು ಆಗಿದ್ರಿ ಎಂದು ಕಿಡಿಕಾರಿದರು.

ಇದನ್ನೂ ಓದಿ: 

ಚಿಂತೆ ಮಾಡಬೇಡಿ ಅಲ್ಲಿ ಯೋಗಿಇದ್ದಾರೆ. ಯೋಗಿ ಯಾರ ತಪ್ಪನ್ನೂ ಸಹಿಸಲ್ಲ. ಹಾಗಾಗಿ 8 ಜನರನ್ನು ಜೈಲಿಗೆ ಹಾಕಿದ್ದಾರೆ. ನಿಮ್ಮ ಬಳಿ ಬೇರೆ ಮಾಹಿತಿ ಇದ್ದರೆ ಎಸ್‌ಐಟಿಗೆ ಕೊಡಲಿ ಅಂತ ತಿರುಗೇಟು ಕೊಟ್ಟರು. ಕಾಂಗ್ರೆಸ್ ಅವರಿಗೆ ರಾಮನ ಬಗ್ಗೆ ಪ್ರೀತಿ ಇಲ್ಲ. ರಾಮ ಮಂದಿರ ನಿರ್ಮಾಣಕ್ಕೆ ನೀವು ಅಡತಡೆ ನಿವಾರಿಸಿಲ್ಲ, ವಿರೋಧಿಸಿದ್ರಿ. ಈಗ ಯಾಕೆ ಮಾತನಾಡುತ್ತೀರಾ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

5 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

8 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

8 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

9 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

9 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

9 hours ago