ಉಡುಪಿ:ರಾಮ ಮಂದಿರ ನಿರ್ಮಾಣದ ವಿರುದ್ಧವಾಗಿ ಸುಪ್ರಿಂ ತೀರ್ಪು ನೀಡಿದರೆ ನಾನೇ ಮೊದಲು ವಿರೋಧಿಸುತ್ತೇನೆ. ಹಿಂದೂ ಸಮಾಜದವರು ದೇಶಾದ್ಯಂತ ಸಂಘಟಿತರಾಗಬೇಕು ಎಂದು ಪೇಜಾವರ ಶ್ರೀ ಹೇಳಿದರು.
ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಧಾರ್ಮಿಕ ವಿಚಾರಗಳು ಕೋರ್ಟ್ ಗೆ ಯಾಕೆ? ಶಬರಿಮಲೆ ಹಿಂದೂ ಸಮಾಜದ ಕೇಂದ್ರ ಬಿಂದು. ಇಲ್ಲಿನ ಸಂಪ್ರದಾಯ ಬೇರೆ ಯಾವ ಕ್ಷೇತ್ರದಲ್ಲಿಯೂ ಇಲ್ಲ. ಧಾರ್ಮಿಕ ಶಿಸ್ತಿನ ಶಿಕ್ಷಣವನ್ನು ಅಯ್ಯಪ್ಪ ಕಲಿಸಿದ್ದಾನೆ. ನಿಯಮಬದ್ಧ ದೇವಾಲಯದ ವಿಚಾರದಲ್ಲಿ ಆಂದೋಲನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು. ಇಂತಹ ನಿರ್ಣಯವನ್ನು ಸಂತರು, ಭಕ್ತರು ಮಾಡಬೇಕು. ದೇವಸ್ಥಾನಗಳಿಗೆ ದಲಿತರ ಪ್ರವೇಶಕ್ಕೆ ಹಿಂದೂ ಸಮಾಜದ ಬೆಂಬಲವಿದೆ. ಆದರೆ ಕೋರ್ಟ್ ಧಾರ್ಮಿಕ ಪರಿವರ್ತನೆಯನ್ನು ಮಾಡಬಾರದು ಎಂದ ಶ್ರೀಗಳು, ಕೇರಳ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಪ್ರಜೆಗಳನ್ನು ಧಮನ ಮಾಡುತ್ತಿದೆ. ಇತ್ತ ಕೇರಳ ಸರ್ಕಾರವು ಸರ್ವಾಧಿಕಾರಿ ಧೋರಣೆ ತಾಳಿದೆ ಎಂದು ಆರೋಪಿಸಿದರು.
ಪಂದಳ ರಾಜರು, ಭಕ್ತರು, ಅರ್ಚಕರ ಅಭಿಪ್ರಾಯಕ್ಕೆ ಕೋರ್ಟ್ ಮನ್ನಣೆ ನೀಡಲಿ. ಹಿಂದೂ ಸಮಾಜ ಮಹಿಳೆಯರನ್ನು ತಿರಸ್ಕಾರ ಮಾಡಿಲ್ಲ. ನಮ್ಮ ಸಂಪ್ರದಾಯವನ್ನು ಮಹಿಳೆಯರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಜಾಹೀರಾತುಗಳು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…