ಬೆಳ್ತಂಗಡಿ, : ರಾಮರಾಜ್ಯದ ಕಲ್ಪನೆಗೆ ಕೇಂದ್ರವಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಅತೀ ಅಗತ್ಯ. ಈ ಶಿಲಾನ್ಯಾಸದ ಶುಭ ಮುಹೂರ್ತದಲ್ಲಿ ಪ್ರಾರಂಭವಾಗಿರುವ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಾರ್ಥಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ. ಶ್ರೀರಾಮ ಭಗವಂತನ ಅವತಾರವೆಂದು ಭಾರತೀಯರ ನಂಬಿಕೆ, ಶ್ರದ್ಧೆ. ಆತ ಭೂಮಿಯಲ್ಲಿ ಅವತರಿಸಿದ ಬಳಿಕ ತನ್ನ ಸದ್ಗುಣಗಳಿಂದ ಆದರ್ಶಮೂರ್ತಿ ಎನಿಸಿದ. ಸಹಸ್ರಾರು ವರ್ಷಗಳಿಂದ ಮರ್ಯಾದಾ ಪುರುಷೋತ್ತಮನೆನಿಸಿ ತನ್ನ ವ್ಯಕ್ತಿತ್ವ, ದೃಢ ನಿರ್ಧಾರಗಳಿಂದಾಗಿ ಜನಮಾನಸದಲ್ಲಿ ನೆಲೆಯಾದ. ತನ್ನ ಆದರ್ಶಗಳಿಂದ ವಿಶ್ವವ್ಯಾಪಿಯಾದ.
ಆಧುನಿಕ ಜಗತ್ತಿನ ಭೌತಿಕ ಪ್ರಗತಿಯ ಮಧ್ಯೆಯೂ ರಮಾನಂದಸಾಗರರ ‘ರಾಮಾಯಣ’ ದೂರದರ್ಶನದಲ್ಲಿ ಪ್ರಸಾರವಾದಾಗ ಜನರು ಈ ರಾಮಕತೆಯಿಂದ, ರಾಮನ ಆದರ್ಶಗಳಿಂದ ಆಕರ್ಷಿತವಾಗಿರುವುದನ್ನು ಕಂಡರೆ ಶ್ರೀರಾಮ ಸ್ಮರಣೆ ಇನ್ನೂ ಸಹಸ್ರ ವರ್ಷಗಳವರೆಗೆ ಈ ನೆಲದಲ್ಲಿ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಎಂಬುದು ಸತ್ಯ.
ಕೆಲವೇ ತಿಂಗಳ ಹಿಂದೆ ಅಯೋಧ್ಯೆಗೆ ಹೋಗಿ ಪವಿತ್ರ ಭೂ ಸ್ಪರ್ಶ ಮಾಡಿ ಹಿರಿಯ ಸಂತರಿಗೆ ಗೌರವ ಸಲ್ಲಿಸಿ ಬಂದಿದ್ದೇನೆ. ಈ ಸಾಧನೆಗೆ ಸಂಕಲ್ಪ ಮಾಡಿದ ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಶ್ರದ್ಧಾಳುಗಳಿಗೂ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…