ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ, ಮಂದಿರದ ನಿರ್ಮಾಣಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಶ್ರದ್ಧಾಳುಗಳಿಗೆ ಅಭಿನಂದನೆ’ : ವೀರೇಂದ್ರ ಹೆಗ್ಗಡೆ -Vishwanews24

ಬೆಳ್ತಂಗಡಿ,  : ರಾಮರಾಜ್ಯದ ಕಲ್ಪನೆಗೆ ಕೇಂದ್ರವಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಅತೀ ಅಗತ್ಯ. ಈ ಶಿಲಾನ್ಯಾಸದ ಶುಭ ಮುಹೂರ್ತದಲ್ಲಿ ಪ್ರಾರಂಭವಾಗಿರುವ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಾರ್ಥಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ. ಶ್ರೀರಾಮ ಭಗವಂತನ ಅವತಾರವೆಂದು ಭಾರತೀಯರ ನಂಬಿಕೆ, ಶ್ರದ್ಧೆ. ಆತ ಭೂಮಿಯಲ್ಲಿ ಅವತರಿಸಿದ ಬಳಿಕ ತನ್ನ ಸದ್ಗುಣಗಳಿಂದ ಆದರ್ಶಮೂರ್ತಿ ಎನಿಸಿದ. ಸಹಸ್ರಾರು ವರ್ಷಗಳಿಂದ ಮರ್ಯಾದಾ ಪುರುಷೋತ್ತಮನೆನಿಸಿ ತನ್ನ ವ್ಯಕ್ತಿತ್ವ, ದೃಢ ನಿರ್ಧಾರಗಳಿಂದಾಗಿ ಜನಮಾನಸದಲ್ಲಿ ನೆಲೆಯಾದ. ತನ್ನ ಆದರ್ಶಗಳಿಂದ ವಿಶ್ವವ್ಯಾಪಿಯಾದ.

ಆಧುನಿಕ ಜಗತ್ತಿನ ಭೌತಿಕ ಪ್ರಗತಿಯ ಮಧ್ಯೆಯೂ ರಮಾನಂದಸಾಗರರ ‘ರಾಮಾಯಣ’ ದೂರದರ್ಶನದಲ್ಲಿ ಪ್ರಸಾರವಾದಾಗ ಜನರು ಈ ರಾಮಕತೆಯಿಂದ, ರಾಮನ ಆದರ್ಶಗಳಿಂದ ಆಕರ್ಷಿತವಾಗಿರುವುದನ್ನು ಕಂಡರೆ ಶ್ರೀರಾಮ ಸ್ಮರಣೆ ಇನ್ನೂ ಸಹಸ್ರ ವರ್ಷಗಳವರೆಗೆ ಈ ನೆಲದಲ್ಲಿ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಎಂಬುದು ಸತ್ಯ.

ಕೆಲವೇ ತಿಂಗಳ ಹಿಂದೆ ಅಯೋಧ್ಯೆಗೆ ಹೋಗಿ ಪವಿತ್ರ ಭೂ ಸ್ಪರ್ಶ ಮಾಡಿ ಹಿರಿಯ ಸಂತರಿಗೆ ಗೌರವ ಸಲ್ಲಿಸಿ ಬಂದಿದ್ದೇನೆ. ಈ ಸಾಧನೆಗೆ ಸಂಕಲ್ಪ ಮಾಡಿದ ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಶ್ರದ್ಧಾಳುಗಳಿಗೂ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

23 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago