ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯ ಕರಾದ ಎಲ್.ಕೆ.ಆಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರನ್ನು ವಿಶ್ವ ಹಿಂದೂ ಪರಿಷತ್ ಮಂಗಳವಾರ ಭೇಟಿಯಾಗಿ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಿದೆ.
ವಿಎಚ್‌ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಅಲೋಕ್ ಕುಮಾರ್ ಮಾಹಿತಿ ನೀಡಿದ್ದು, ರಾಮ ಮಂದಿರ ಚಳವಳಿಯ ನೇತಾರರಾದ ಅಡ್ವಾಣಿ ಹಾಗೂ ಜೋಶಿ ಇಬ್ಬರನ್ನೂ ಭೇಟಿಯಾಗಿ, ಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ. ಇಬ್ಬರೂ ಹಿರಿ ಯರು ಬರುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಮಂದಿರ ಚಳವಳಿ ಕುರಿತಂತೆ ಅವರೊಂದಿಗೆ ಚರ್ಚೆ ನಡೆಸಿದೆವು ಎಂದು ತಿಳಿಸಿದ್ದಾರೆ.
ಅಡ್ವಾಣಿ ಹಾಗೂ ಜೋಷಿಯವರು ಹಿರಿಯರಾಗಿರುವ ಹಾಗೂ ಅನಾರೋಗ್ಯವಿರುವ ಕಾರಣ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರದಂತೆ ಮನವಿ ಮಾಡಲಾಗಿದ್ದು, ಅದಕ್ಕೆ ಅವರು ಒಪ್ಪಿದ್ದಾರೆ ಎಂದು ಮಂದಿರ ಟ್ರಸ್ಟ್‌ನ ಚಂಪತ್ ರಾಯ್ ನೀಡಿದ್ದ ಹೇಳಿಕೆ ವಿವಾದಕ್ಕೀಡಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಇಬ್ಬರೂ ನಾಯಕರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಅವರ ಆರೋಗ್ಯ ದೃಷ್ಟಿಯಿಂದ ಸಮಾರಂಭಕ್ಕೆ ಆಗಮಿಸದಂತೆ ವಿನಂತಿ ಮಾಡಿದ್ದೇವೆ ಎಂದು ತಿಳಿಸಿದ್ದರು
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…