ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಥವಾ ಅದಕ್ಕೆ ಅಧಿಕೃತವಾಗಿ ದೇಣಿಗೆ ಸಂಗ್ರಹಕ್ಕೆ ತಮ್ಮ ವಿರೋಧ ಇಲ್ಲ. ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಹಣ ದುರ್ಬಳಕೆಗೆ ಮಾತ್ರ ವಿರೋಧವಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಶಿವಮೊಗ್ಗದಲ್ಲಿ ನೀಡಿದ ಹೇಳಿಕೆ ಕುರಿತು ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬೀದಿ ಬೀದಿಯಲ್ಲಿ ಹಣ ಸಂಗ್ರಹ ನಡೆಯುತ್ತಿದೆ. ಇದಕ್ಕೆ ಯಾರು ಹೊಣೆ ಮತ್ತು ಲೆಕ್ಕ ಕೊಡುವವರು ಯಾರು ಎಂಬುದು ನನ್ನ ಪ್ರಶ್ನೆ’ ಎಂದರು.
ದೇಣಿಗೆ ಕೊಡದವರ ಮನೆಗಳಿಗೆ ಸ್ಟಿಕ್ಕರ್ ಅಂಟಿಸುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ದೇಣಿಗೆ ಕೊಡುವಂತೆ ಜನರನ್ನು ಪ್ರೇರೇಪಿಸಬೇಕೆಂಬ ಉದ್ದೇಶವಿದ್ದರೆ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಅಳವಡಿಸಲಿ. ಮನೆಗೆ ಏಕೆ ಸ್ಟಿಕ್ಕರ್ ಅಂಟಿಸಬೇಕು ಎಂದು ಕೇಳಿದರು.
ಟೂಲ್‌ಕಿಟ್ ಪ್ರಕರಣ : ನಿಕಿತಾಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24
ಪೋಲಿ, ಪುಂಡರೆಲ್ಲ ವಿಶ್ವ ಹಿಂದೂ ಪರಿಷತ್ ಸದಸ್ಯರು ಎಂದು ಹೇಳಿಕೊಂಡು ಬೀದಿ, ಬೀದಿಗಳಲ್ಲಿ ರಾಮ ಮಂದಿರದ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದಾರೆ. ಹೀಗೆ ಹಣ ವಸೂಲಿಗೆ ಸರ್ಕಾರದ ಅನುಮತಿ ಇದೆಯೆ? ಹಣ ಸಂಗ್ರಹಿಸುವ ವ್ಯಕ್ತಿಗಳಿಗೆ ವಿಶ್ವ ಹಿಂದೂ ಪರಿಷತ್ ಗುರುತಿನ ಚೀಟಿ ನೀಡಿದೆಯೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
‘ಹಣ ದುರ್ಬಳಕೆ ಆಗದಂತೆ ತಡೆಯಿರಿ ಎಂದು ಕೇಳುವುದು ಅಪರಾಧವೆ? 1989ರಲ್ಲಿ ರಾಮ ಮಂದಿರದ ಹೆಸರಿನಲ್ಲಿ ಸಂಗ್ರಹಿಸಿದ ಹಣ, ಇಟ್ಟಿಗೆ, ಸ್ಟೀಲ್ ಪ್ರಮಾಣ ಎಷ್ಟು? ಅದು ಏನಾಯಿತು? ಎಂಬ ಮಾಹಿತಿ ಈವರೆಗೂ ಹೊರಬಂದಿಲ್ಲ. ಮತ್ತೆ ಅದೇ ರೀತಿ ಆಗಬಾರದು ಎಂಬುದು ತಮ್ಮ ಉದ್ದೇಶ’ ಎಂದರು.
‘ಮೂರು ಜನರು ನನ್ನ ಮನೆಗೂ ದೇಣಿಗೆ ಸಂಗ್ರಹಕ್ಕೆ ಬಂದಿದ್ದರು. ದೇಣಿಗೆ ಕೊಡದಿರುವುದಕ್ಕೆ ಬೆದರಿಕೆಯ ಧಾಟಿಯಲ್ಲಿ ಮಾತನಾಡಬಾರದು. ಸಾಮಾನ್ಯ ಜನರ ಜತೆ ಈ ರೀತಿ ಚೆಲ್ಲಾಟ ಆಡಬಾರದು. ಧರ್ಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸಬಾರದು’ ಎಂದು ಹೇಳಿದರು.
ನಮ್ಮ ಪಕ್ಷದ ಹಲವಾರು ಮಂದಿ ದೇಣಿಗೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಅಧಿಕೃತ ವ್ಯಕ್ತಿಗಳು ಅಥವಾ ಅವರ ಅಧಿಕೃತ ಪ್ರತಿನಿಧಿಗಳು ಸಂಪರ್ಕಿಸಿದರೆ ದೇಣಿಗೆ ನೀಡಲು ಸಿದ್ಧ ಎಂದು ತಿಳಿಸಿದರು.
ನಾಝಿ ಸಂಸ್ಕೃತಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಕೃತಿ ಒಂದೇ ಎಂಬುದು ಇತಿಹಾಸ ತಜ್ಞರ ಅಭಿಪ್ರಾಯ. ಅದನ್ನೇ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದ್ದೇನೆ. ಆರ್ ಎಸ್ ಎಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಂಘಟನೆಯೆ? ದೇಶಕ್ಕಾಗಿ ಶ್ರಮಿಸಿದ ಜನರ ಬಗ್ಗೆ ಈ ಸಂಘಟನೆ ಹೇಗೆಲ್ಲಾ ಅಪಪ್ರಚಾರ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ನಾನು ನನ್ನ ಕರ್ತವ್ಯಗಳನ್ನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಮಾಡಿದ್ದೇನೆ : ಕಿರಣ್ ಬೇಡಿ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…