ರಾಮ ಮಂದಿರ ನಿರ್ಮಾಣದ ಐತಿಹಾಸಿಕ ಕ್ಷಣಕ್ಕೆ ಭರ್ಜರಿಯಾಗಿ ಸಿಂಗಾರಗೊಂಡಿದೆ ಅಯೋಧ್ಯೆ -Vishwanews24

ಲಕ್ನೋ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಐತಿಹಾಸಿಕ ಕ್ಷಣಕ್ಕೆ ಇನ್ನು ಎರಡು ದಿನ. ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ. ಈ ಶುಭ ಸಂದರ್ಭಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ.

ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಯ ಐತಿಹಾಸಿಕ ಕ್ಷಣಕ್ಕಾಗಿ ರಾಮ ಮಂದಿರ ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದೆ. ಪುರುಷೋತ್ತಮ ರಾಮನ ಮಂದಿರಕ್ಕಾಗಿ ಅಯೋಧ್ಯೆ ಭರ್ಜರಿಯಾಗಿ ಅಲಂಕೃತಗೊಂಡಿದೆ. ಭಾರೀ ಭದ್ರತೆಯನ್ನು ಸಹ ಕೈಗೊಳ್ಳಲಾಗಿದೆ. ಕೊರೊನಾ ಹಿನ್ನೆಲೆ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ.

ಮುಖ್ಯವೇದಿಕೆಯಲ್ಲಿ ಐವರಿಗೆ ಮಾತ್ರ ಸ್ಥಾನ ಕಲ್ಪಿಸಲಾಗುತ್ತಿದೆ. ಪ್ರಧಾನಿ ಮೋದಿ, ರಾಮಜನ್ಮಭೂಮಿ ನ್ಯಾಸ್ ಮುಖ್ಯಸ್ಥ ನೃತ್ಯ ಗೋಪಾಲದಾಸ್, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಸೇರಿದಂತೆ ಒಟ್ಟು ಐವರಷ್ಟೇ ವೇದಿಕೆ ಅಲಂಕರಿಸಲಿದ್ದಾರೆ. ಭದ್ರತಾ ಕಾರಣಗಳಿಂದಾಗಿ 200 ಗಣ್ಯರ ಬದಲಿಗೆ 170 ಗಣ್ಯರಿಗೆ ಅವಕಾಶ ನೀಡಲಾಗಿದೆ. ಮಂದಿರದ ಕನಸು ಕಂಡಿದ್ದ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗಿಯಾಗಲಿದ್ದಾರೆ.

ಬರೋಬ್ಬರಿ 15 ಪೀಳಿಗೆಯಿಂದ ದೇಶ ಹಾಗೂ ವಿದೇಶಗಳಲ್ಲಿ 131 ದೇವಾಲಯಗಳ ವಿನ್ಯಾಸ ಮಾಡಿರುವ ಅಹಮದಾಬಾದ್‍ನ ಖ್ಯಾತ ಶಿಲ್ಪಿ ಚಂದ್ರಕಾಂತ್ ಸೋಂಪುರ ನೇತೃತ್ವದಲ್ಲಿ ಅವರ ಕುಟುಂಬ ಎಲ್ಲ ಕಾಲಕ್ಕೂ ಸಲ್ಲುವ, ಭವ್ಯ ರಾಮ ಮಂದಿರ ನಿರ್ಮಿಸಲಿದೆ.ನಾಗರ ಶೈಲಿಯಲ್ಲಿ ಮರ್ಯಾದ ಪುರುಷೋಷತ್ತಮ ಮಂದಿರ ನಿರ್ಮಾಣವಾಗಲಿದೆ. ಈ ಮೊದಲು 270 ಅಡಿ ಉದ್ದ, 145 ಅಡಿ ಅಗಲ, 141 ಅಡಿ ಎತ್ತರದ ಮಂದಿರ ನಿರ್ಮಿಸಲು ಯೋಜಿಸಲಾಗಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ರಾಮಮಂದಿರ ಬರೋಬ್ಬರಿ 360 ಅಡಿ ಉದ್ದ, 235 ಅಡಿ ಅಗಲ ಮತ್ತು 161 ಅಡಿ ಎತ್ತರ ಇರಲಿದೆ.

ರಾಮ ಮಂದಿರದ ತಳಭಾಗ 25 ಅಡಿ ಇರಲಿದೆ. ಅದರ ಮೇಲೆ ಡಿಸೈನ್‍ನಲ್ಲಿ 6 ಅಡಿ ಆವರಣ ಇರಲಿದೆ. 16.03 ಅಡಿ ಎತ್ತರದ ಒಟ್ಟು 366 ಸ್ಥಂಭಗಳನ್ನು ಮಂದಿರ ನಿರ್ಮಾಣಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ನೆಲಮಹಡಿಯಲ್ಲಿ 161 ಸ್ಥಂಭ ಇರಲಿದ್ದು, ಇಲ್ಲಿಯೇ ರಾಮನ ಮೂರ್ತಿ ನಿರ್ಮಾಣ ಮಾಡಲಾಗುತ್ತದೆ. ಮೊದಲ ಅಂತಸ್ತಿನಲ್ಲಿ ರಾಮ್‍ಲಲ್ಲಾನ ಗರ್ಭಗುಡಿ ಇರಲಿದೆ. ಇದು ಅಷ್ಟಭುಜಾಕೃತಿಯಲ್ಲಿ ಇರಲಿದೆ. ಇದರ ಪಕ್ಕದಲ್ಲೇ ರಾಮ್ ದರ್ಬಾರ್ ಪ್ರಾಂಗಣ, ಇದರ ಎಡಭಾಗದಲ್ಲಿ ನೃತ್ಯ ಮಂಟಪ, ಅದರ ಹಿಂಬದಿಯಲ್ಲಿ ರಂಗಮಂಟಪ ಇರಲಿದೆ.

 

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

13 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

16 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

18 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

19 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

19 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

19 hours ago