ಉಡುಪಿ: ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ದಂತೆ ಶ್ರೀಕೃಷ್ಣಮಠದ ಕಡೆಗೋಲು ಕೃಷ್ಣ ಪಟ್ಟಾಭಿರಾಮನಾಗಿ ಭಕ್ತರಿಗೆ ದರ್ಶನ ಕೊಟ್ಟಿದ್ದಾನೆ.
ಉಡುಪಿ ಶ್ರೀಕೃಷ್ಣನಿಗೆ ಈ ಸಂದರ್ಭದಲ್ಲಿ ಪಟ್ಟಾಭಿರಾಮನ ಅಲಂಕಾರ ಮಾಡಲಾಗಿತ್ತು. ಈ ಮೂಲಕ ಶ್ರೀಕೃಷ್ಣನಲ್ಲಿ ಶ್ರೀರಾಮನನ್ನು ಕಂಡುಕೊಳ್ಳಲಾಯಿತು. ಅಷ್ಠ ಮಠಗಳಲ್ಲಿ ಒಂದಾದ ಕಾಣಿಯುರು ಮಠಾಧೀಶ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ವಿಶೇಷ ಅಲಂಕಾರ ಮಾಡಿದ್ದರು. ಶ್ರೀಕೃಷ್ಣನಿಗೆ ರಾಮಾಲಂಕಾರ ಮಾಡಿ ಕೃಷ್ಣನನ್ನು ಶ್ರೀ ರಾಮನನ್ನಾಗಿಸಿದರು.
ಬಿಲ್ಲು ಬಾಣವನ್ನು ಹಿಡಿದು, ಸಿಂಹಾಸನದಲ್ಲಿ ಕುಳಿತು ಪಟ್ಟಾಭಿಷೇಕ ಆದ ದಿನವನ್ನು ಸ್ವಾಮೀಜಿಗಳು ನೆನಪು ಮಾಡಿ ಕೊಟ್ಟರು. ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು ಪಟ್ಟಾಭಿರಾಮನಿಗೆ ಮಹಾಪೂಜೆಯನ್ನು ನೆರವೇರಿಸಿದರು.
ಉತ್ತರ ಭಾರತದಲ್ಲಿ ಧಾರ್ಮಿಕ ವಿಧಿವಿಧಾನಗಳು ಶ್ರೀರಾಮನಿಗೆ ಅರ್ಪಣೆಯಾಗುತ್ತಿದ್ದಂತೆ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಉಡುಪಿಯಲ್ಲಿ ಶ್ರೀಕೃಷ್ಣ ಮಠದಲ್ಲಿ ಮಹಾಪೂಜೆಯನ್ನು ನೆರವೇರಿಸಲಾಯಿತು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…