ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.
ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್ನ ಕೆಲವು ನಾಯಕರು ಟೀಕಿಸಿದ್ದಾರೆ. ಈ ಮಧ್ಯೆ, ರಾಮ ಮಂದಿರಕ್ಕೆ ದೇಣಿಗೆ ನೀಡಿದವರಲ್ಲಿ ಅನೇಕ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂಬುದು ಗಮನಾರ್ಹ. ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಶುಭ ಕೋರಿದ್ದು, ರಾಮ ರಾಜ್ಯದ ಕನಸು ನನಸಾಗಿಸುವಲ್ಲಿ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಇದೆ ಎಂದು ಪ್ರತಿಪಾದಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…