Featured

ರಾಮ ರಾಜ್ಯ ಕನಸು ಕಾಂಗ್ರೆಸ್ ಗ್ಯಾರಂಟಿಗಳಿಂದ ನನಸು : ಡಿಕೆ ಶಿವಕುಮಾರ್ – vishwanews24

ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ – ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ  ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್​ನ ಕೆಲವು ನಾಯಕರು ಟೀಕಿಸಿದ್ದಾರೆ. ಈ ಮಧ್ಯೆ, ರಾಮ ಮಂದಿರಕ್ಕೆ ದೇಣಿಗೆ ನೀಡಿದವರಲ್ಲಿ ಅನೇಕ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂಬುದು ಗಮನಾರ್ಹ. ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಶುಭ ಕೋರಿದ್ದು, ರಾಮ ರಾಜ್ಯದ ಕನಸು ನನಸಾಗಿಸುವಲ್ಲಿ ಕಾಂಗ್ರೆಸ್​​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಇದೆ ಎಂದು ಪ್ರತಿಪಾದಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago