Featured

ರಾಯಚೂರು: ಒಂದೇ ಕುಟುಂಬದ ಮೂವರು ಯುವತಿಯರ ಆತ್ಮಹತ್ಯೆ ಯತ್ನಕ್ಕೆ ಬಿಗ್ ಟ್ವಿಸ್ಟ್ – vishwanews24

ರಾಯಚೂರು: ಒಂದೇ ಕುಟುಂಬದ ಮೂವರು ಯುವತಿಯರ ಆತ್ಮಹತ್ಯೆ ಯತ್ನಕ್ಕೆ ಬಿಗ್ ಟ್ವಿಸ್ಟ್

ತಾವು ಪ್ರೀತಿಸಿದವರನ್ನು ಮದುವೆಯಾಗಲು ಮನೆಯಲ್ಲಿ ಒಪ್ಪುವುದಿಲ್ಲ‌ ಎಂದು ವಿಷ ಕುಡಿದ ಯುವತಿಯರು

ರಾಯಚೂರು: ಇಲ್ಲಿನ  ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಮನೆಯ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ನಿಗೂಢವಾಗಿದ್ದ ಕಾರಣ ಬಯಲಾಗಿದೆ. ಯುವತಿಯರು ತಾವು ಪ್ರೀತಿಸಿದವರನ್ನು ಮದುವೆಯಾಗಲು ಮನೆಯಲ್ಲಿ ಒಪ್ಪುವುದಿಲ್ಲ‌ ಎಂದು ಒಟ್ಟಾಗಿ ಆತ್ಮಹತ್ಯೆಗೆ ಯತ್ನಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಗ್ರಾಮದ ಒಂದೇ ಮನೆಯ ಮೂವರು ಯುವತಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ರಿಮಿನಾಶಕ ಸೇವಿಸಿ ಬಳಿಕ ಬಾವಿಗೆ ಹಾರಿದ್ದ ಇಬ್ಬರು ಯುವತಿಯರಲ್ಲಿ ರೇಣುಕಾ (17) ಸಾವನ್ನಪ್ಪಿದ್ದಾಳೆ. ಹತ್ತಿ ಹೊಲಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಮೂವರು ಯುವತಿಯರು ಕ್ರಿಮಿನಾಶಕ ಸೇವಿಸಿದ್ದರು. ಇನ್ನೂ ಹದಿನೈದೇ ದಿನದಲ್ಲಿ ರೇಣುಕಾ ನಿಶ್ಚಿತಾರ್ಥ ಮಾಡಲು ನಿರ್ಧರಿಸಲಾಗಿತ್ತು ಎಂದು ತಿಳಿದು ಬಂದಿದೆ.

ಇನ್ನೋರ್ವ ಯುವತಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾಳೆ. ಕ್ರಿಮಿನಾಶಕ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡಿರುವ ಮತ್ತೋರ್ವ ಯುವತಿಯ ಪರಿಸ್ಥಿತಿ ಗಂಭೀರವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮೂವರು ಯುವತಿಯರು ಸಂಬಂಧಿಕರಾದ್ರೂ ಸ್ನೇಹಿತೆಯರಂತೆ ಬಹಳ ಅನ್ಯೋನ್ಯವಾಗಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾ ಪೋಷಕರು, ಇನ್ನಿಬ್ಬರು ಯುವತಿಯರು ಸೇರಿ ತಮ್ಮ ಮಗಳಿಗೆ ವಿಷ ಕುಡಿಸಿ ಬಾವಿಗೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೂವರು ಯುವತಿಯರ ಪ್ರೇಮ ಪ್ರಕರಣವೇ ಘಟನೆಗೆ ಕಾರಣ ಅನ್ನೋದು ಬಯಲಾಗಿದೆ. ಮನೆಯಲ್ಲಿ ತಮ್ಮ ಪ್ರೀತಿಗೆ ಒಪ್ಪಲ್ಲ, ತಾವು ಪ್ರೀತಿಸಿದವರೊಂದಿಗೆ ಮದುವೆಗೆ ಸಮ್ಮತಿ ಸೂಚಿಸಲ್ಲ ಎಂದು ಯುವತಿಯರು ಒಟ್ಟಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದರು ಎಂಬುದು ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ತಿಳಿಸಿದ್ದಾರೆ.

ರೇಣುಕಾ ಸಾವನ್ನಪ್ಪಿದ ಹಿನ್ನೆಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

8 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

9 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago