ರಾಯಚೂರು: ಜಿಲ್ಲೆಯಲ್ಲಿ ಬ್ರ್ಯಾಂಡೆಡ್ ವಸ್ತುಗಳ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಸಿರವಾರ ತಾಲೂಕಿನ ಬಾಲಾಜಿ ಕ್ಯಾಂಪ್‍ನಲ್ಲಿ ನಕಲಿ ಚಹಾಪುಡಿ, ಕೊಬ್ಬರಿ ಎಣ್ಣೆ, ಫೆವಿಕಾಲ್, ಡಿಟರ್‌ಜೆಂಟ್ ಪೌಡರ್ ತಯಾರಿಸಿ ಬ್ರ್ಯಾಂಡೆಡ್ ಕಂಪನಿ ಲೆಬಲ್ ಹಾಕಿ ಜಿಲ್ಲೆಯ ಹಲವೆಡೆ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರು ಪರಾರಿಯಾಗಿದ್ದು, ರತನ್ ಸಿಂಗ್, ರಾಘವೇಂದ್ರ ಬಂಧಿತ ಆರೋಪಿಗಳು. ಪೊಲೀಸ್ ದಾಳಿ ವೇಳೆ 16 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿಯಾಗಿವೆ. ನಕಲಿ ಉತ್ಪನ್ನಗಳ ಪ್ಯಾಕೆಟ್‍ಗಳು, ಪ್ಯಾಕಿಂಗ್ ಯಂತ್ರಗಳು, ಬುಲೆರೋ ಪಿಕಪ್ ವಾಹನ ಹಾಗೂ ಕಚ್ಚಾ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂರ್ನಾಲ್ಕು ತಿಂಗಳಿಂದ ಗ್ರಾಮದ ಹಳೆಯ ರೆಸಿಡೆನ್ಸಿ ಶಾಲೆಯೊಂದರ ಕೊಠಡಿಯಲ್ಲಿ ನಕಲಿ ದಂಧೆ ನಡೆದಿದೆ. ತಮ್ಮದೇ ಆದ ಮಾರ್ಕೆಟಿಂಗ್ ಜಾಲವನ್ನು ಇಟ್ಟುಕೊಂಡು ಗ್ರಾಮೀಣ ಭಾಗದಲ್ಲಿ ಅಸಲಿ ವಸ್ತುಗಳೆಂದೇ ಮಾರಾಟ ಮಾಡುತ್ತಿದ್ದರು. ಇದೀಗ ಪೊಲೀಸರು ನಕಲಿ ಮಾರಾಟ ದಂಧೆಯನ್ನು ಪತ್ತೆಹಚ್ಚಿ ಪ್ರಕರಣ ದಾಖಲಾಗಿಸಿಕೊಂಡಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…