ರಾಯಣ್ಣ ಪ್ರತಿಮೆ ಭಗ್ನ , ವಾಹನಗಳ ಮೇಲೆ ಕಲ್ಲು ತೂರಾಟ : ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ – Vishwanews24

Featured, ರಾಜ್ಯ ನ್ಯೂಸ್

ರಾಯಣ್ಣ ಪ್ರತಿಮೆ ಭಗ್ನ , ವಾಹನಗಳ ಮೇಲೆ ಕಲ್ಲು ತೂರಾಟ : ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ – Vishwanews24

ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನ ಮೊದಲಾದ ಘಟನೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಳಗಾವಿ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆ ಅನ್ವಯವಾಗಲಿದೆ. ಇಂದು ಬೆಳಿಗ್ಗೆ 8ರಿಂದ ನಾಳೆ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಗುಂಪು‌ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.

ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ , ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ : ಕುಮಾರಸ್ವಾಮಿ – Vishwanews24