ರಾಯಚೂರು: ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಹೊರಟಿದ್ದ ಮೂವತ್ತಮೂರು ಅಡಿ ಎತ್ತರದ ಏಕಶಿಲಾ ಆಂಜನೇಯ ದೇವರ ವಿಗ್ರಹ ಮಂತ್ರಾಲಯಕ್ಕೆ ತಲುಪಿದೆ.
ಶ್ರೀ ರಾಘವೇಂದ್ರಸ್ವಾಮಿ ಮಠದಿಂದ ಪ್ರತಿಷ್ಠಾಪಿಸಲು ಉದ್ದೇಶಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ವಿಗ್ರಹಕ್ಕೆ ಮಂತ್ರಾಲಯದಲ್ಲಿ ಬುಧವಾರ ಭವ್ಯ ಸ್ವಾಗತ ನೀಡಲಾಯಿತು.
ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ಎಮ್ಮಿಗನೂರು ರಸ್ತೆಯಲ್ಲಿರುವ ಬಸ್ ನಿಲ್ದಾಣ ಬಳಿ ವಿಗ್ರಹಕ್ಕೆ ಪೂಜೆ ನೆರವೇರಿಸಿ ಬರಮಾಡಿಕೊಂಡರು. ನಂತರ ಗ್ರಾಮದ ಮುಖ್ಯರಸ್ತೆಯಲ್ಲಿ ಭಜನೆ ಸಂಕೀರ್ತನೆ, ಮಂಗಳ ವಾದ್ಯ ಮೇಳದೊಂದಿಗೆ ವಿಗ್ರಹವನ್ನು ಶ್ರೀಮಠದ ಗೋಶಾಲೆ ಬಳಿಯ ನೂತನ ವಿದ್ಯಾಪೀಠದವರೆಗೆ ಮೆರವಣಿಗೆಯಲ್ಲಿ ತರಲಾಯಿತು. ರಸ್ತೆಯ ಇಕ್ಕೆಲಗಳಲ್ಲಿ ನಿಂತ ಜನರು ಆಂಜಿನೇಯ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…