ರಾವತ್ ನಿವಾಸಕ್ಕೆ ಪಾರ್ಥಿವ ಶರೀರ: ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರಿಂದ ಅಂತಿಮ ನಮನ – Vishwanews24
ರಾವತ್ ನಿವಾಸಕ್ಕೆ ಪಾರ್ಥಿವ ಶರೀರ: ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರಿಂದ ಅಂತಿಮ ನಮನ – Vishwanews24
ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಪಾರ್ಥಿವ ಶರೀರಗಳನ್ನು ದೆಹಲಿಯ ಅವರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ತರಲಾಯಿತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅನುವುಮಾಡಿಕೊಡಲಾಗಿದೆ.
Delhi | The mortal remains of CDS Gen Bipin Rawat and his wife Madhulika Rawat were brought to their residence
They both passed away in #TamilNaduChopperCrash on 8th December. pic.twitter.com/OUuD6xwuAK
— ANI (@ANI) December 10, 2021
ಇದಕ್ಕೂ ಮುನ್ನ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಲಿದ್ದರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಲಿದ್ದರ್ ಅವರ ಪತ್ನಿ ಹಾಗೂ ಪುತ್ರಿ ಕೂಡ ಅಂತಿಮ ನಮನ ಸಲ್ಲಿಸಿದರು. ಬಳಿಕ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.
ತಮಿಳುನಾಡಿನ ಕೂನೂರಿನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್, ಮಧುಲಿಕಾ, ಲಿದ್ದರ್ ಸೇರಿ 13 ಮಂದಿ ಮೃತಪಟ್ಟಿದ್ದರು. ಈವರೆಗೆ ನಾಲ್ವರ ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ಹಾಗೂ ಹತ್ತಿರದ ಸಂಬಂಧಿಕರಿಂದ ಪಡೆದ ರಕ್ತದ ಮಾದರಿ ಜೊತೆ ಹೋಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.
ಅತ್ಯಧಿಕ ಮತಗಳಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲ್ತಾರೆಂಬ ವಿಶ್ವಾಸವಿದೆ : ಎಚ್.ಡಿ.ರೇವಣ್ಣ – Vishwanews24
