ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಪಾರ್ಥಿವ ಶರೀರಗಳನ್ನು ದೆಹಲಿಯ ಅವರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ತರಲಾಯಿತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅನುವುಮಾಡಿಕೊಡಲಾಗಿದೆ.
ಇದಕ್ಕೂ ಮುನ್ನ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಲಿದ್ದರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಲಿದ್ದರ್ ಅವರ ಪತ್ನಿ ಹಾಗೂ ಪುತ್ರಿ ಕೂಡ ಅಂತಿಮ ನಮನ ಸಲ್ಲಿಸಿದರು. ಬಳಿಕ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.
ತಮಿಳುನಾಡಿನ ಕೂನೂರಿನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್, ಮಧುಲಿಕಾ, ಲಿದ್ದರ್ ಸೇರಿ 13 ಮಂದಿ ಮೃತಪಟ್ಟಿದ್ದರು. ಈವರೆಗೆ ನಾಲ್ವರ ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ಹಾಗೂ ಹತ್ತಿರದ ಸಂಬಂಧಿಕರಿಂದ ಪಡೆದ ರಕ್ತದ ಮಾದರಿ ಜೊತೆ ಹೋಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…