ಮಂಗಳೂರು: ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 13 ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59 ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
5 ರಿಂದ 7 ವರ್ಷದೊಳಗಿನ ರಾಷ್ಟ್ರಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಆರ್ನಾ ರಾಜೇಶ್ ಮೂರು ಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಹಾಗೂ ಎರಡು ಲ್ಯಾಪ್ ರಿಂಕ್ ರೇಸ್ ನಲ್ಲಿ ಕಂಚಿನ ಪದಕ ಪಡೆದಿದ್ದಾರೆ
ಆರ್ನಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 1 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ.ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿದ್ದು,ತರಬೇತುದಾರರಾದ ಮೋಹನ್ ದಾಸ್.ಕೆ, ಜಯರಾಜ್ ಹಾಗೂ ರಮಾನಂದ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ಬೆಂಗಳೂರಿನ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…