Featured

ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿಧ್ವಜ ಹಾರಿಸುವ ಅಗತ್ಯವೇನಿದೆ : ಡಿಕೆಶಿ – Vishwanews24

ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿಧ್ವಜ ಹಾರಿಸುವ ಅಗತ್ಯವೇನಿದೆ ..

ನಮ್ಮ ಧ್ವಜವೇ ನಮ್ಮ ಧರ್ಮ..

ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಅತಿ ದುಃಖದ ದಿನ..

ರಾಜ್ಯಾದ್ಯಂತ ಕಾಲೇಜುಗಳನ್ನು ಬಂದ್ ಮಾಡುವಂತೆ ಸಿಎಂಗೆ ಮನವಿ

ಬೆಂಗಳೂರು: ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಅತಿ ದುಃಖದ ದಿನವಾಗಿದೆ. ಆ ದುಃಖವನ್ನ ಹೇಳುವುದಕ್ಕೆ ಸಾಧ್ಯವಿಲ್ಲ. ನಮಗೆ ಒಂದು ಸಂವಿಧಾನ ಕೊಟ್ಟಿದ್ದಾರೆ. ನಮ್ಮ ಧ್ವಜವೇ ನಮ್ಮ ಧರ್ಮ. ನಮ್ಮ ದೇಶ ಕಟ್ಟಲು ಐಕ್ಯತೆಗೆ ಹಲವರು ಪ್ರಾಣ ಕೊಟ್ಟಿದ್ದಾರೆ. ನಮ್ಮ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ. ರಾಜ್ಯದಲ್ಲಿ ಏನ್ ಆಗ್ತಿದೆ ಎಂದು ಡಿಕೆಶಿ ಪ್ರಶ್ನಿಸಿದರು.

ಕೇಸರಿ ಬಗ್ಗೆ ಎಲ್ಲರಿಗೂ ಗೌರವ ಇದೆ. ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೆ. ಹೀಗಿರುವಾಗ ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿಧ್ವಜ ಹಾರಿಸುವ ಅಗತ್ಯವೇನಿದೆ. ರಾಷ್ಟ್ರಧ್ವಜ ಇಳಿಸಿರುವುದಕ್ಕೆ ಯಾರು ಉತ್ತರ ಕೊಡ್ತಾರೆ..? ವಿದ್ಯಾರ್ಥಿಗಳ ಭವಿಷ್ಯ ಅವರ ಉದ್ಯೋಗದಲ್ಲಿ ಬದುಕಿನ ಬಗ್ಗೆ ಯೋಚನೆ ಮಾಡಬೇಕು. ವಿದ್ಯಾರ್ಥಿಗಳಿಗೆ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು. ಮೊದಲಿನಿಂದ ಏನು ಪಾಲನೆ ಮಾಡಿಕೊಂಡು ಬಂದಿದ್ದಾರೆ ಅದನ್ನ ಮುಂದುವರಿಸಿಕೊಂಡು ಹೋಗಬೇಕು ಎಂದರು.

ನಾನು ಸಿಎಂಗೆ ಮನವಿ ಮಾಡ್ತೇನೆ. ರಾಜ್ಯಕ್ಕೆ ಹಿಂದಕ್ಕೆ ಹೋಗುತ್ತಿದೆ. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು. ಸಮಸ್ಯೆ ಬಗ್ಗೆ ಹರಿಯುವರಿಗೂ ಒಂದು ವಾರಗಳ ಕಾಲೇಜುಗಳನ್ನು ಬಂದ್ ಮಾಡಿ. ಪೋಷಕರು, ಶಾಲಾ ಆಡಳಿತ ಮಂಡಳಿ, ಜಿಲ್ಲಾ ಆಡಳಿತ ಜೊತೆ ಚರ್ಚೆ ತೀರ್ಮಾನ ಮಾಡಲಿ. ಒಟ್ಟಿನಲ್ಲಿ ರಾಜ್ಯಾದ್ಯಂತ ಕಾಲೇಜುಗಳನ್ನು ಬಂದ್ ಮಾಡುವಂತೆ ಸಿಎಂಗೆ ಕೈಮುಗಿದು ಡಿಕೆಶಿ ಮನವಿ ಮಾಡಿದರು.

ಯಾರು ಎಷ್ಟೆಷ್ಟು ಕೇಸರಿ ಶಾಲಿಗೆ ಆರ್ಡರ್ ಕೊಟ್ಟಿದ್ದಾರೆ. ಆರ್ಡರ್ ಕೊಟ್ಟಿರುವವರ ಬಗ್ಗೆ ಗೊತ್ತಿದೆ. ಇದು ಇನ್ನೆಲ್ಲಿಗೆ ಹೋಗುತ್ತೋ ಗೊತ್ತಿಲ್ಲ. ಸೀಮೆಎಣ್ಣೆ, ಪೆಟ್ರೋಲ್ ಹಾಕೋರು ಗೊತ್ತಿದೆ. ಮೊದಲು ಇದನ್ನ ನಿಲ್ಲಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಕಿಡಿಕಾರಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago