Featured

ರಾಷ್ಟ್ರಪತಿ ಕೋವಿಂದ್ ಉಡುಪಿ‌ಗೆ ಆಗಮನ: ಅಪರಾಹ್ನ ಪೇಜಾವರ ಮಠಕ್ಕೆ ಭೇಟಿ

ಉಡುಪಿ, ಡಿ. 27: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಪೂರ್ವಾಹ್ನ 11:35ಕ್ಕೆ  ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮಿಸಿದರು.
ಸನ್ಯಾಸ್ಯಾಶ್ರಮ ಸ್ವೀಕರಿಸಿ 80 ವರ್ಷಗಳನ್ನು ಪೂರೈಸಿರುವ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕಾಗಿ ಅವರು ಇದೇ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡುತಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆದಿಉಡುಪಿ ಹೆಲಿಪ್ಯಾಡ್‌ಗೆ ಆಗಮಿಸಿದ ರಾಷ್ಟ್ರಪತಿಗಳು, ಅಪರಾಹ್ನ ಪೇಜಾವರ ಮಠಕ್ಕೆ ತೆರಳಿ ಪೇಜಾವರಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ನಂತರ ಶ್ರೀಕೃಷ್ಣ ಮಠಕ್ಕೆ ತೆರಳಿ ಕೃಷ್ಣ-ಮುಖ್ಯಪ್ರಾಣರ ದರ್ಶನ ಪಡೆಯುವರು. ನಂತರ ಅವರು ಮಂಗಳೂರಿಗೆ ನಿರ್ಗಮಿಸುವ ಕಾರ್ಯಕ್ರಮವಿದೆ.
ಅವರಿಗೆ ರಾಜ್ಯ‌ಪಾಲ ವಾಜುಭಾಯಿ ರುದಾಭಾಯಿ ವಾಲಾ, ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ. ಆಚಾರ್ಯ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಎಸ್‌ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಉ‌ಸ್ತುವಾರಿ ಸಚಿವೆ ಜಯಮಾಲಾ ರಾಷ್ಟ್ರಪತಿಯನ್ನು ಸ್ವಾಗತಿಸಿದರು.
ಬಳಿಕ ನೇರವಾಗಿ ರಥಬೀದಿಗೆ ಆಗಮಿಸಿದ ರಾಷ್ಟ್ರಪತಿ 11:42ಕ್ಕೆ ಪೇಜಾವರ ಮಠಕ್ಕೆ ಆಗಮಿಸಿದರು.
Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

7 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

7 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

7 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

8 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

8 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

9 hours ago