ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು – Vishwanews24
ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು
ನವದೆಹಲಿ: 2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಉನ್ನತ ಸಚಿವರು, ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಇಂದು ಮಧ್ಯಾಹ್ನ ದೆಹಲಿಯ ಸಂಸತ್ತು ಭವನದಲ್ಲಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
