Featured

ರಾಷ್ಟ್ರಪತಿ ಸಂಸತ್‌ ಉದ್ಘಾಟನೆ ಮಾಡುವಂತೆ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ನಿರಾಕರಣೆ – Vishwanews24

ರಾಷ್ಟ್ರಪತಿ ಸಂಸತ್‌ ಉದ್ಘಾಟನೆ ಮಾಡುವಂತೆ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ನಿರಾಕರಣೆ

ನವದೆಹಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡುವಂತೆ ಲೋಕಸಭೆ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಪಿ.ಎಸ್. ನರಸಿಂಹ ಅವರನ್ನೊಳಗೊಂಡ ರಜಾಕಾಲದ ಪೀಠವು ಅರ್ಜಿದಾರರಿಗೆ ಹೀಗೆ ಹೇಳಿದೆ. ಅಂತಹ ಅರ್ಜಿ ಹಿಡಿದು ಅವು ಇಲ್ಲಿಗೇಕೆ ಬಂದಿದ್ದಾರೆ ಎಂದು ಪ್ರಶ್ನಿಸಿದೆ. ಅಲ್ಲದೆ 32 ನೇ ವಿಧಿಯ ಅಡಿಯಲ್ಲಿ ಅದನ್ನು ಅರ್ಜಿ ಪರಿಗಣಿಸಲು ನ್ಯಾಯಾಲಯವು ಆಸಕ್ತಿ ಹೊಂದಿಲ್ಲ ಎಂದು ಒತ್ತಿ ಹೇಳಿದರು. ಅಲ್ಲದೆ ಕಲಂ 79 ಇಲ್ಲಿ ಹೇಗೆ ಪ್ರಸ್ತುತವಾಗುತ್ತದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.

ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುತ್ತಾರೆ. ಹೀಗಾಗಿ ಪ್ರಧಾನಿ ಕಟ್ಟಡ ಉದ್ಘಾಟಿಸುತ್ತಿರುವುದು ಸಂಪೂರ್ಣವಾಗಿ ವಿಧಿ 79 ಮತ್ತು 87 ಅನ್ನು ಉಲ್ಲಂಘಿಸುತ್ತದೆ ಎಂದು ವಕೀಲ ಸಿ.ಆರ್. ಜಯಾ ಸುಕಿನ್ ಹೇಳಿದರು. ಅಲ್ಲದೆ ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುವುದರಿಂದ ಅವರು ಕಟ್ಟಡವನ್ನು ಉದ್ಘಾಟಿಸಬೇಕು ಎಂದು ವಾದಿಸಿದರು. ಪೀಠವು ಅರ್ಜಿ ಸ್ವೀಕರಿಸಲು ನಿರಾಕರಿಸಿದ ನಂತರ, ಸುಕಿನ್ ಅರ್ಜಿಯನ್ನು ಹಿಂಪಡೆಯಲು ಒಪ್ಪಿಕೊಂಡರು. ವಕೀಲರಾದ ಸಿ.ಆರ್.ಜಯಾ ಸುಕಿನ್ ಅವರು ಸಲ್ಲಿಸಿದ ಅರ್ಜಿಯಲ್ಲಿ ಪ್ರತಿವಾದಿಗಳಾದ ಲೋಕಸಭೆ ಸಚಿವಾಲಯ, ಭಾರತ ಕೇಂದ್ರ, ಗೃಹ ಸಚಿವಾಲಯ ಮತ್ತು ಭಾರತ ಕೇಂದ್ರ, ಕಾನೂನು ಮತ್ತು ನ್ಯಾಯ ಸಚಿವಾಲಯವು ಸಂವಿಧಾನವನ್ನು ಉಲ್ಲಂಘಿಸಿದೆ, ಸಂವಿಧಾನವನ್ನು ಗೌರವಿಸುತ್ತಿಲ್ಲ ಎಂದು ಉಲ್ಲೇಕಿಸಿದ್ದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

2 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

2 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

2 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

3 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago