ನವದೆಹಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡುವಂತೆ ಲೋಕಸಭೆ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಪಿ.ಎಸ್. ನರಸಿಂಹ ಅವರನ್ನೊಳಗೊಂಡ ರಜಾಕಾಲದ ಪೀಠವು ಅರ್ಜಿದಾರರಿಗೆ ಹೀಗೆ ಹೇಳಿದೆ. ಅಂತಹ ಅರ್ಜಿ ಹಿಡಿದು ಅವು ಇಲ್ಲಿಗೇಕೆ ಬಂದಿದ್ದಾರೆ ಎಂದು ಪ್ರಶ್ನಿಸಿದೆ. ಅಲ್ಲದೆ 32 ನೇ ವಿಧಿಯ ಅಡಿಯಲ್ಲಿ ಅದನ್ನು ಅರ್ಜಿ ಪರಿಗಣಿಸಲು ನ್ಯಾಯಾಲಯವು ಆಸಕ್ತಿ ಹೊಂದಿಲ್ಲ ಎಂದು ಒತ್ತಿ ಹೇಳಿದರು. ಅಲ್ಲದೆ ಕಲಂ 79 ಇಲ್ಲಿ ಹೇಗೆ ಪ್ರಸ್ತುತವಾಗುತ್ತದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.
ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುತ್ತಾರೆ. ಹೀಗಾಗಿ ಪ್ರಧಾನಿ ಕಟ್ಟಡ ಉದ್ಘಾಟಿಸುತ್ತಿರುವುದು ಸಂಪೂರ್ಣವಾಗಿ ವಿಧಿ 79 ಮತ್ತು 87 ಅನ್ನು ಉಲ್ಲಂಘಿಸುತ್ತದೆ ಎಂದು ವಕೀಲ ಸಿ.ಆರ್. ಜಯಾ ಸುಕಿನ್ ಹೇಳಿದರು. ಅಲ್ಲದೆ ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುವುದರಿಂದ ಅವರು ಕಟ್ಟಡವನ್ನು ಉದ್ಘಾಟಿಸಬೇಕು ಎಂದು ವಾದಿಸಿದರು. ಪೀಠವು ಅರ್ಜಿ ಸ್ವೀಕರಿಸಲು ನಿರಾಕರಿಸಿದ ನಂತರ, ಸುಕಿನ್ ಅರ್ಜಿಯನ್ನು ಹಿಂಪಡೆಯಲು ಒಪ್ಪಿಕೊಂಡರು. ವಕೀಲರಾದ ಸಿ.ಆರ್.ಜಯಾ ಸುಕಿನ್ ಅವರು ಸಲ್ಲಿಸಿದ ಅರ್ಜಿಯಲ್ಲಿ ಪ್ರತಿವಾದಿಗಳಾದ ಲೋಕಸಭೆ ಸಚಿವಾಲಯ, ಭಾರತ ಕೇಂದ್ರ, ಗೃಹ ಸಚಿವಾಲಯ ಮತ್ತು ಭಾರತ ಕೇಂದ್ರ, ಕಾನೂನು ಮತ್ತು ನ್ಯಾಯ ಸಚಿವಾಲಯವು ಸಂವಿಧಾನವನ್ನು ಉಲ್ಲಂಘಿಸಿದೆ, ಸಂವಿಧಾನವನ್ನು ಗೌರವಿಸುತ್ತಿಲ್ಲ ಎಂದು ಉಲ್ಲೇಕಿಸಿದ್ದರು.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…