Featured

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಬೋಧನೆಗಳು ದೇಶದಲ್ಲಿ ಕ್ಷೀಣಿಸುತ್ತಿವೆ , ಅವರ ಹಂತಕ ನಾಥುರಾಮ್ ಗೋಡ್ಸೆಯ ಸಿದ್ಧಾಂತವು ಪ್ರಬಲವಾಗುತ್ತಿದೆ : ತುಷಾರ್ ಗಾಂಧಿ ವಿಷಾದ- Vishwanews24

ರಾಷ್ಟ್ರಪಿತ ಮಹಾತ್ಮ ಗಾಂಧೀಯವರ ಬೋಧನೆಗಳನ್ನು ಅನುಸರಿಸುವವರ ಸಂಖ್ಯೆ ದೇಶದಲ್ಲಿ ಕಡಿಮೆಯಾಗುತ್ತಿದ್ದು , ಅವರ ಹಂತಕ ನಾಥುರಾಮ್ ಗೋಡ್ಸೆಯ ಸಿದ್ಧಾಂತವು ಪ್ರಬಲವಾಗುತ್ತಿದೆ : ತುಷಾರ್ ಗಾಂಧಿ – Vishwanews24

ಜಲ್ನಾ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಬೋಧನೆಗಳನ್ನು ಅನುಸರಿಸುವವರ ಸಂಖ್ಯೆ ದೇಶದಲ್ಲಿ ಕಡಿಮೆಯಾಗುತ್ತಿದ್ದು, ಆದರೆ ಅವರ ಹಂತಕ ನಾಥುರಾಮ್ ಗೋಡ್ಸೆಯ ಸಿದ್ಧಾಂತವು ಪ್ರಬಲವಾಗುತ್ತಿದೆ ಎಂದು ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ವಿಷಾದಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಿಸುತ್ತಿದ್ದರೆ, ಮತ್ತೊಂದೆಡೆ ಸಮಾಜದಲ್ಲಿ ‘ದ್ವೇಷದ ವಿಷ’ ಹರಡುತ್ತಿರುವುದಕ್ಕೆ ಸಾಕ್ಷಿಯಾಗುತ್ತಿದೆ ಎಂದು ಬೇಸರಿಸಿದ್ದಾರೆ.

ಇಲ್ಲಿನ ಜೆಇಎಸ್ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರವು ಮಹಾತ್ಮಾ ಗಾಂಧೀಜಿಯವರ ಪುಣ್ಯತಿಥಿಯಂದು ಆಯೋಜಿಸಿದ್ದ ‘ಕರ್ ಕೆ ದೇಖೋ’ (ಮಾಡು ಮತ್ತು ನೋಡಿ) ಎಂಬ ವಾಸ್ತವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ :

‘ಪ್ರಗತಿಪರ ಭಾರತ ಮತ್ತು ಅದರ ಶ್ರೀಮಂತ ಇತಿಹಾಸದ 75 ವರ್ಷಗಳ ವೈಭವವನ್ನು ಸ್ಮರಿಸಲು ಸರ್ಕಾರವು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದೆ, ಆದರೆ ‘ಅಮೃತ’ ಈಗ ದ್ವೇಷದ ವಿಷವಾಗಿ ಮಾರ್ಪಟ್ಟಿದ್ದು ಅದೇ ಹೆಚ್ಚು ಹರಡುತ್ತಿದೆ, ”ಎಂದು ಅವರು ಹೇಳಿದರು.

“ಮಹಾತ್ಮ ಗಾಂಧಿಯವರ ಬೋಧನೆಗಳು ಕ್ಷೀಣಿಸುತ್ತಿವೆ ಮತ್ತು ಅವರ ಹಂತಕ ನಾಥೂರಾಂ ಗೋಡ್ಸೆಯ ಸಿದ್ಧಾಂತ , ಗಾಂಧಿಯ ಬೋಧನೆಗಳ ಮೇಲೆ ಪ್ರಾಬಲ್ಯ ಸಾಧಿಸುತ್ತಿದೆ. ಒಂದು ವರ್ಗದ ಜನರು ಇತಿಹಾಸವನ್ನು ವಿರೂಪಗೊಳಿಸುತ್ತಿದ್ದಾರೆ ಮತ್ತು ಅದನ್ನು ತಮ್ಮದೇ ರೀತಿಯಲ್ಲಿ ಪುನಃ ಬರೆಯುತ್ತಿದ್ದಾರೆ. ಆದರೆ ನಾವು ನೈಜ ಇತಿಹಾಸವನ್ನು ಪುನರುಜ್ಜೀವನಗೊಳಿಸಬೇಕಾಗಿದೆ ಮತ್ತು ಸಮಾಜದಲ್ಲಿನ ದ್ವೇಷ ಮತ್ತು ವಿಭಜನೆಯ ವಿರುದ್ಧ ಧ್ವನಿ ಎತ್ತಬೇಕು,’’ ಎಂದರು.

ನಾವು ಹಿಂಸೆ, ದ್ವೇಷ ಮತ್ತು ವಿಭಜನೆಯ ಸಂಸ್ಕೃತಿಯನ್ನು ಅಳವಡಿಸಿಕೊಂಡಿದ್ದೇವೆ. ನಾವು ಧರ್ಮ, ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ವಿಭಜನೆಯಾಗಿದ್ದೇವೆ. ನಮ್ಮ ವಿಭಜನೆಯೇ ನಮ್ಮ ಗುರುತು, ಮನಸ್ಥಿತಿ; ಮತ್ತು ಸಾಮಾಜಿಕ ವ್ಯವಸ್ಥೆಗಳು ವಿಭಜನೆಯನ್ನು ಆಧರಿಸಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago