Featured

ರಾಷ್ಟ್ರಭಕ್ತ ಎಲ್ಲಾ ಮುಸ್ಲಿಂ ಸಂಘಟನೆಗಳು ಒಂದಾಗಿ ದೇಶದ ಏಕತೆಗಾಗಿ ಒಗ್ಗಟ್ಟಾಗಬೇಕು : ರಹೀಮ್ ಉಚ್ಚಿಲ್ – Vishwnaews24

ಮುಸ್ಲಿಂ ಸಮಾಜ ಒಂದಾಗಿ ನಮ್ಮವರೇ ಆದ ಕಾಶ್ಮೀರ ಪಂಡಿತರ ನೈತಿಕ ಬೆಂಬಲಕ್ಕೆ ನಿಲ್ಲಬೇಕು ..

ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಂ ಧರ್ಮಗಳ ನಾಯಕತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುವಂತಾಗಬೇಕು..

ಭಯೋತ್ಪಾದಕರ ಈ ಹೀನ ಕೃತ್ಯಕ್ಕೂ ಇಸ್ಲಾಮ್ ಧರ್ಮಕ್ಕೂ ಯಾವ ಸಂಭಂದವೂ ಇಲ್ಲ..

ಮಂಗಳೂರು: ‘ಪ್ರಧಾನಿ ನರೇಂದ್ರ ಮೋದೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ.

ಜಮ್ಮು ಕಾಶ್ಮೀರದಲ್ಲಿ ಶಾಂತಿಯಿಂದ ಬದುಕು ಕಟ್ಟಿಕೊಳ್ಳಲು ಬಯಸುವ ಅಲ್ಲಿಯ ನಾಗರಿಕರಿಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳಿಂದ ನೆಮ್ಮದಿಯ ಜೀವನ ಸಾಗಿಸಲು ಕಷ್ಟವಾಗಲಿದ್ದು ಇಸ್ಲಾಮ್ ಧರ್ಮಕ್ಕೆ ಕಳಂಕ ತರುವ ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಂ ಧರ್ಮಗಳ ನಾಯಕತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುವಂತಾಗಬೇಕು’ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದಾರೆ.

ಇವರು ರಾಷ್ಟ್ರಭಕ್ತ ಎಲ್ಲಾ ಮುಸ್ಲಿಂ ಸಂಘಟನೆಗಳು ಒಂದಾಗಿ ದೇಶದ ಏಕತೆಗಾಗಿ ಹಾಗೂ ಪಾಕಿಸ್ತಾನಕ್ಕೆ ನೇರ ಸಂದೇಶ ನೀಡಲು ಒಗ್ಗಟ್ಟಾಗಬೇಕೆಂದು ಮುಸ್ಲಿಂ ಧರ್ಮಗುರುಗಳು ಹಾಗೂ ಮುಸ್ಲಿಂ ಸಂಘಟನೆಗಳಿಗೆ ಆಗ್ರಹಿಸಿದ್ದಾರೆ.

ಭಾರತದ ಆಂತರಿಕ ಸಮಸ್ಯೆ ಏನೇ ಇದ್ದರೂ ಪರಸ್ಪರ ಬಗೆಹರಿಸಲು ನಾವು ಶಕ್ತರಿದ್ದೇವೆ. ಆದರೆ ಶತ್ರು ದೇಶದಂತೆ ವ್ಯವಹರಿಸುತ್ತಿರುವ ಪಾಕಿಸ್ತಾನ ನಮ್ಮ ಸಹನೆಯನ್ನು ಪರೀಕ್ಷಿಸುತ್ತಿದ್ದು ಭಾರತದ ಮುಸಲ್ಮಾನರು ಒಗ್ಗೂಡಿ ಇಂತಹ ಕೃತ್ಯವನ್ನು ಗಟ್ಟಿ ದನಿಯಲ್ಲಿ ವಿರೋಧಿಸಬೇಕಾಗಿದೆ ಎಂದು ಹೇಳಿರುವ ಅವರು ಇದಕ್ಕೆ ಪಂಥ ಪಂಗಡ ಹಾಗೂ ರಾಜಕೀಯ ಬದಿಗಿಟ್ಟು ಧಾರ್ಮಿಕ ನಾಯಕರ ಮುಖಂಡತ್ವದಲ್ಲಿ ಒಂದಾಗಬೇಕು ಎಂದು ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನದ ಜೊತೆ ಯುದ್ಧ ಘೋಷಣೆಯಾದರೆ ಭಾರತದ ಮುಸಲ್ಮಾನರು ದೇಶಕ್ಕಾಗಿ ಪ್ರಾಣ ಅರ್ಪಿಸಲು ಸಿದ್ದರಾಗಿ ಎಂದು ಕರೆ ನೀಡಿದ ಅಂದಿನ ಮೌಲಾನಗಳು ಅದೇ ಮಾತನ್ನು ಮತ್ತೊಮ್ಮೆ ತಮ್ನ ಸಮಾಜ ಬಾಂಧವರಿಗೆ ಕರೆ ನೀಡುವ ಕಾಲ ಸನ್ನಿಹಿತವಾಗಿದ್ದು ಪಾಕಿಸ್ತಾನದ ಹಾಗೂ ಅದರ ಬೆಂಬಲಿತರ ಉಪಟಳ ಹೆಚ್ಚಾಗುವಾಗ ಇಂತಹ ಕರೆ ದೇಶದ ಹಿತದೃಷ್ಟಿಯಿಂದ ಅಗತ್ಯವಾಗಿ ಬೇಕಾಗಿದೆ ಎಂದು ರಹೀಮ್ ಉಚ್ಚಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಯೋತ್ಪಾದಕರ ಈ ಹೀನ ಕೃತ್ಯಕ್ಕೂ ಇಸ್ಲಾಮ್ ಧರ್ಮಕ್ಕೂ ಯಾವ ಸಂಭಂದವೂ ಇಲ್ಲ. ಬಿನ್ ಲ್ಯಾಡನ್ ಮುಲ್ಲಾ ಉಮರ್ ರಂತವರ ಅನುಯಾಯಿಗಳಿಂದ ಮಾತ್ರ ಇಂತಹ ಕೃತ್ಯ ಸಾಧ್ಯವೇ ಹೊರತು ಪ್ರವಾದಿ ಮುಹಮ್ಮದರ ಅನುಯಾಯಿಗಳಿಂದ ಇದು ಸಾಧ್ಯವಿಲ್ಲ .ಮುಸ್ಲಿಂ ಸಮಾಜ ಒಂದಾಗಿ ನಮ್ಮವರೇ ಆದ ಕಾಶ್ಮೀರ ಪಂಡಿತರ ನೈತಿಕ ಬೆಂಬಲಕ್ಕೆ ನಿಲ್ಲಬೇಕು ಎಂದು ಮಾಧ್ಯಮ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.\

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago