ಉಡುಪಿ: ರಾಷ್ಟ್ರೀಯ ಕಾನೂನು ಪ್ರಾಧಿಕಾರ ಭಾರತ ಸರಕಾರ-ನವದೆಹಲಿ ಇವರಿಂದ ನೀಡಲ್ಪಡುವ, “ರಾಷ್ಟ್ರಮಟ್ಟದ ಉತ್ತಮ ಕಾನೂನು ಪ್ರಾಧಿಕಾರದ ಸ್ವಯಂಸೇವಕ” ವಿಶೇಷ ಗೌರವಕ್ಕೆ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಆಯ್ಕೆಗೊಳಿಸಿದ್ದಾರೆ.
ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಈ ಸಾಲಿನ ಏಕೈಕ ವ್ಯಕ್ತಿ ಮತ್ತು ಉಡುಪಿ ಜಿಲ್ಲೆಯ ಸಾಧಕರಿಗೆ ರಾಷ್ಟ್ರೀಯ ಕಾನೂನು ಪ್ರಾಧಿಕಾರ ದಿಂದ ಸಲ್ಲಿಕೆಯಾಗುವ ಗೌರವಕ್ಕೆ ಪಾತ್ರವಾಗುವ ಪ್ರಥಮ ಸಾಧಕ ವ್ಯಕ್ತಿ ಇವರೆಂದು ತಿಳಿದು ಬಂದಿದೆ.
ವಿಶು ಶೆಟ್ಟಿ ಅವರು ಯಾವುದೇ ಫಲಾಪೇಕ್ಷೆ ಬಯಸದೆ ಮಾಡಿರುವ ಅಪ್ರತಿಮ ಸಮಾಜಸೇವೆ, ಕಾನೂನಿನ ಪರಿಪಾಲನೆ, ಅಸಹಾಯಕ ಸ್ಥಿತಿಯಲ್ಲಿರುವ ಮಹಿಳೆಯರ ರಕ್ಷಣೆ, ಮಕ್ಕಳ ರಕ್ಷಣೆ, ಹಿರಿಯ ನಾಗರಿಕರ ರಕ್ಷಣೆ, ಮಾನಸಿಕ ಅಸ್ವಸ್ಥರ ರಕ್ಷಣೆ, ನಿರ್ಗತಿಕರಿಗೆ ಪುರ್ನವಸತಿ, ಶಿಕ್ಷಣಕ್ಕೆ ನೆರವು ಮೊದಲಾದ ಮಾದರಿಯ ಸಮಾಜಮುಖಿ ಕೆಲಸ ಕಾರ್ಯಗಳ ಗುರುತಿಸಿ ಇವರನ್ನು ಗೌರವಕ್ಕೆ ಆಯ್ಕೆಗೊಳಿಸಲಾಗಿದೆ.
ನವೆಂಬರ್ ೯ ರಂದು ನವದೆಹಲಿಯ ಸುಪ್ರಿಂಕೊರ್ಟ್ನಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಹಾಗೂ ಸುಪ್ರಿಂಕೊರ್ಟಿನ ಮುಖ್ಯ ನ್ಯಾಯಧೀಶರುಗಳಿಂದ ವಿಶು ಶೆಟ್ಟಿ ಅವರು ಗೌರವ ಸ್ವೀಕರಿಸಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…