ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದು, ಇದೀಗ ಅವರಿಗೆ ಶುಭಾಶಯಗಳ ಸುರಿಮಳೆಗಳೇ ಹರಿದುಬರುತ್ತಿವೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯವಾದಿಗಳು, ಅಪ್ಪಟ ದೇಶ ಭಕ್ತರನ್ನು ಹೊಂದಿರುವ ಪಕ್ಷವೇ ಬಿಜೆಪಿ. ದೇಶ ಸೇವೆಯ ಗುರಿ ಹೊಂದಿರುವ ಪ್ರತಿ ದೇಶವಾಸಿಯೂ ಬಿಜೆಪಿಯನ್ನೇ ಬೆಂಬಲಿಸುತ್ತಾರೆ. ಅಣ್ಣಾಮಲೈ ಅವರನ್ನು ತುಂಬು ಹೃದಯದಿಂದ ನಮ್ಮ ಬಿಜೆಪಿ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು, ಮಾದರಿ ಕಾರ್ಯದಕ್ಷತೆಗೆ ಸಿಂಗಂ ಎಂದೇ ಖ್ಯಾತರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಅವರ ನೇತೃತ್ವದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಪಕ್ಷದ ಸದಸ್ಯತ್ವ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ಅಣ್ಣಾಮಲೈ ಅವರು, ನಾನು ಸಾಮಾನ್ಯ ಕಾರ್ಯಕರ್ತನಂತೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ನನಗಿಂತ ಮುನ್ನ ಸಾವಿರಾರು ಕಾರ್ಯಕರ್ತರು ಪಕ್ಷಕ್ಕಾಗಿ ಕೆಲಸ ಮಾಡಿದ್ದು, ನಾನು ಪಕ್ಷದಲ್ಲಿ ಏನನ್ನು ನಿರೀಕ್ಷೆ ಮಾಡದೆ ಸೇರ್ಪಡೆಯಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…