Featured

ರಾಷ್ಟ್ರೀಯ  ಕಾಂಗ್ರೆಸ್ ನಾಯಕರು ಹಣ ಪಡೆದು ಬಿಫಾರಂ ವಿತರಣೆ : ಸಚಿವೆ ಶೋಭಾ ಕರಂದ್ಲಾಜೆ – Vishwanews24

ರಾಷ್ಟ್ರೀಯ  ಕಾಂಗ್ರೆಸ್ ನಾಯಕರು ಹಣ ಪಡೆದು ಬಿಫಾರಂ ವಿತರಣೆ ಮಾಡಿದ್ದಾರೆ  : ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ಕಾಂಗ್ರೆಸ್ ಹಣ ಪಡೆದು ಬಿಫಾರಂ ವಿತರಣೆ ಮಾಡಿದೆ, ಈ ಹಿನ್ನೆಲೆಯಲ್ಲಿ 224 ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ದೂರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಹಣ ಪಡೆದು ಬಿಫಾರಂ ವಿತರಣೆ ಮಾಡಿದ್ದಾರೆ. ಕಾಂಗ್ರೆಸ್ ಪಾರ್ಟಿ ಬಿಫಾರಂಗೆ 2 ಲಕ್ಷ ರೂ. ಸಂಗ್ರಹ ಮಾಡಿರುವ ಬಗ್ಗೆ ಹೇಳಿದ್ದಾರೆ. ಬಿ ಫಾರಂ ಕೊಡುವುದಕ್ಕೆ ಹಣ ಪಡೆಯುವ ಹಾಗಿಲ್ಲ. ಬಿಫಾರಂಗೆ ಹಣ ಪಡೆದರೆ ಕಾನೂನು ಬಾಹಿರವಾಗುತ್ತದೆ. ಇದು ಲಂಚದಿಂದ ಕೂಡಿರುತ್ತದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಬಿಫಾರಂಗೆ ಹಣ ಪಡೆದಿರುವುದರ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಚುನಾವಣಾ ಆಯೋಗ ತಕ್ಷಣ ಕ್ರಮ ಕೈಗೊಳ್ಳಬೇಕು. 224 ಅಭ್ಯರ್ಥಿಗಳ ಬಿಫಾರಂ ತಿರಸ್ಕರಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯ ರಾಜಕಾರಣದಲ್ಲಿ ಚುನಾವಣಾ ರಂಗು ಹೆಚ್ಚಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಕೆಗೆ ಸಂಬಂಧಿಸಿ ಅಭ್ಯರ್ಥಿಗಳ ನಾಮಪತ್ರದಲ್ಲಿ ದೋಷ ಕಂಡುಬಂದರೆ ಪ್ರತಿಸ್ಪರ್ಧಿಗಳು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿವೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

2 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

10 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

10 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

11 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

11 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

11 hours ago