ಬೆಂಗಳೂರು: ಕಾಂಗ್ರೆಸ್ ಹಣ ಪಡೆದು ಬಿಫಾರಂ ವಿತರಣೆ ಮಾಡಿದೆ, ಈ ಹಿನ್ನೆಲೆಯಲ್ಲಿ 224 ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಹಣ ಪಡೆದು ಬಿಫಾರಂ ವಿತರಣೆ ಮಾಡಿದ್ದಾರೆ. ಕಾಂಗ್ರೆಸ್ ಪಾರ್ಟಿ ಬಿಫಾರಂಗೆ 2 ಲಕ್ಷ ರೂ. ಸಂಗ್ರಹ ಮಾಡಿರುವ ಬಗ್ಗೆ ಹೇಳಿದ್ದಾರೆ. ಬಿ ಫಾರಂ ಕೊಡುವುದಕ್ಕೆ ಹಣ ಪಡೆಯುವ ಹಾಗಿಲ್ಲ. ಬಿಫಾರಂಗೆ ಹಣ ಪಡೆದರೆ ಕಾನೂನು ಬಾಹಿರವಾಗುತ್ತದೆ. ಇದು ಲಂಚದಿಂದ ಕೂಡಿರುತ್ತದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಬಿಫಾರಂಗೆ ಹಣ ಪಡೆದಿರುವುದರ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಚುನಾವಣಾ ಆಯೋಗ ತಕ್ಷಣ ಕ್ರಮ ಕೈಗೊಳ್ಳಬೇಕು. 224 ಅಭ್ಯರ್ಥಿಗಳ ಬಿಫಾರಂ ತಿರಸ್ಕರಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯ ರಾಜಕಾರಣದಲ್ಲಿ ಚುನಾವಣಾ ರಂಗು ಹೆಚ್ಚಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಕೆಗೆ ಸಂಬಂಧಿಸಿ ಅಭ್ಯರ್ಥಿಗಳ ನಾಮಪತ್ರದಲ್ಲಿ ದೋಷ ಕಂಡುಬಂದರೆ ಪ್ರತಿಸ್ಪರ್ಧಿಗಳು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿವೆ.
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…