ಹೊಸದಿಲ್ಲಿ, : ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಟೀಂ ಇಂಡಿಯಾದ ಮಾಜಿ ನಾಯಕ, ಜ್ಯೂನಿಯರ್ ತಂಡದ ಕೋಚ್ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಮಹತ್ವದ ಘೋಷಣೆ ಮಾಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಾಹುಲ್ ಅವರಿಗೆ ಈ ಜವಾಬ್ದಾರಿ ನೀಡಿದ್ದು, ಬೆಂಗಳೂರಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಗೋಡೆ ಎಂದೇ ಖ್ಯಾತರಾಗಿರುವ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರಕ್ಕೂ ಹೆಚ್ಚು ರನ್‌ಗಳಿಸಿದ ಭಾರತ ಎರಡನೇ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಇವರು ಕೇವಲ ಕ್ರಿಕೆಟ್ ಕ್ಷೇತ್ರದಲ್ಲಿ ಮಾತ್ರವೇ ತೊಡಿಗಿಸಿಕೊಂಡಿಲ್ಲ. ಬದಲಾಗಿ ಅವರು ಚಿಲ್ಡ್ರನ್ಸ್ ಮೂಮೆಂಟ್ ಫಾರ್ ಸಿವಿಕ್ ಅವೆರ್ನಸ್, ಏಡ್ಸ್ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯದಲ್ಲೂ ಭಾಗಿಯಾಗಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ದ್ರಾವಿಡ್ ಎನ್‌ಸಿಎ ಮುಖ್ಯಸ್ಥ ಸ್ಥಾನ ವಹಿಸುವದರೊಂದಿಗೆ ಯುವ ಆಟಗಾರರಿಗೆ ತರಬೇತಿ, ಗಾಯಾಳುಗಳಿಗೆ ಪುನಶ್ಚೇತನ ಶಿಬಿರ ಸೇರಿದಂತೆ ಅನೇಕ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ. ಪುರುಷ ತಂಡದ ಜತೆಗೆ ಮಹಿಳಾ ತಂಡಗಳಿಗೂ ನೆರವಾಗಲಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…