ಬೆಂಗಳೂರು : ಮೈತ್ರಿ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಸಿದ್ದವನದಲ್ಲಿ ಕುಳಿತು ಸರ್ಕಾರ ಬೀಳಿಸುವ ಚರ್ಚೆ ನಡೆಸಿದವರು ಸಿದ್ದರಾಮಯ್ಯ ಅಲ್ಲವೇ? ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ ಶಾಸಕರಲ್ಲಿ ಬಹುತೇಕರು ಅವರ ಬೆಂಬಲಿಗರಾಗಿರಲಿಲ್ಲವೇ? ಆದರೂ, ಸರ್ಕಾರ ಬೀಳಿಸಿದ್ದರ ಅಪವಾದದಿಂದ ಪಾರಾಗಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಇದು ಅವರ ಕಪಟ ನೀತಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ನಡುವಿನ ವಾಗ್ದಾಳಿಗಳು ಮುಂದುವರಿದಿವೆ.
ಸಿದ್ದರಾಮಯ್ಯ ಅವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ. ಚಾಮುಂಡೇಶ್ವರಿಯಲ್ಲಿ ಜೆಡಿಎಸ್-ಬಿಜೆಪಿ ಒಳಒಪ್ಪಂದ ಮಾಡಿಕೊಂಡವು, ಅದರಲ್ಲಿ ಕಾಂಗ್ರೆಸ್ಸಿಗರೂ ಸೇರಿದರು, ಬಾದಾಮಿಯಲ್ಲಿ ಗೆಲ್ಲದೇ ಹೋಗಿದ್ದರೆ ಭವಿಷ್ಯ ಕತ್ತಲಾಗುತ್ತಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗೆ ಒಪ್ಪಂದವಾಗಿದ್ದರೆ, ಅದು ಬಾದಾಮಿಗೂ ಅನ್ವಯಿಸುತ್ತಿರಲಿಲ್ಲವೇ? ಬಾದಾಮಿಯಲ್ಲಿ ಅವರನ್ನು ಗೆಲ್ಲಲು ಬಿಡುತ್ತಿದ್ದೆವೆ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸರಣಿ ಟ್ವೀಟ್ ಗಳ ಮೂಲಕ ತಿವಿದಿದ್ದಾರೆ.
2009-2010ರ 20 ಉಪಚುನಾವಣೆಗಳನ್ನು ಸಿದ್ದರಾಮಯ್ಯ ಒಮ್ಮೆ ಪರಾಮರ್ಶೆ ಮಾಡಲಿ. ಆ ಹೊತ್ತಿನಲ್ಲಿ ತಮ್ಮನ್ನು ಕಾಂಗ್ರೆಸ್ ಕಡೆಗಣಿಸಿತ್ತು ಎಂಬ ಕಾರಣಕ್ಕೆ ಅವರು ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಅವರ ಆತ್ಮ ನೆನಪಿಸುತ್ತದೆ. ಅದರ ಪರಿಣಾಮವಾಗಿ ಕಾಂಗ್ರೆಸ್ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನೂ ಮನದಟ್ಟು ಮಾಡಿಸುತ್ತದೆ ಎಂದು ಹೇಳಿದ್ದಾರೆ.
ಮೈತ್ರಿ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಸಿದ್ದವನದಲ್ಲಿ ಕುಳಿತು ಸರ್ಕಾರ ಬೀಳಿಸುವ ಚರ್ಚೆ ನಡೆಸಿದವರು ಸಿದ್ದರಾಮಯ್ಯ ಅಲ್ಲವೇ? ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ ಶಾಸಕರಲ್ಲಿ ಬಹುತೇಕರು ಅವರ ಬೆಂಬಲಿಗರಾಗಿರಲಿಲ್ಲವೇ? ಆದರೂ, ಸರ್ಕಾರ ಬೀಳಿಸಿದ್ದರ ಅಪವಾದದಿಂದ ಪಾರಾಗಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಇದು ಅವರ ಕಪಟ ನೀತಿ ಎಂಬುದಾಗಿ ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಸ್ಥಾನದಿಂದ ಇಳಿದ ನಂತರ ಸಿದ್ದರಾಮಯ್ಯ ಸರ್ಕಾರಿ ನಿವಾಸ ತೊರೆಯಲಿಲ್ಲ. ಆ ವಿಚಾರದಲ್ಲಿ ಕಿಂಚಿತ್ತೂ ನಾಚಿಕೆ ಪ್ರದರ್ಶಿಸಲಿಲ್ಲ. ತಾವು ಸಿಎಂ ಆಗಿದ್ದಾಗ 6 ಗಂಟೆಗೆ ಹೇಳದೇ ಕೇಳದೇ ಕಚೇರಿ ತೊರೆದು ಅಜ್ಞಾತರಾಗುತ್ತಿದ್ದ ಸಿದ್ದರಾಮಯ್ಯ, ರಾತ್ರಿ 12 ಗಂಟೆ ವರೆಗೆ ಕಚೇರಿಯಲ್ಲಿ ದುಡಿಯುತ್ತಿದ್ದ ನನ್ನ ಬಗ್ಗೆ ಮಾತನಾಡುವ ನೈತಿಕತೆ ಉಳ್ಳವರೇ? ಎಂದಿದ್ದಾರೆ.
37 ಸ್ಥಾನ ಗೆದ್ದಿದ್ದ ಜೆಡಿಎಸ್‌ಗೆ ನಾವು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟೆವು ಎಂದು ಸಿದ್ದರಾಮಯ್ಯ ಪದೇ ಪದೆ ಹೇಳುತ್ತಾರೆ. ಅದು 37 ಸ್ಥಾನವಾಗಲಿ, ಅಥವಾ 100 ಸ್ಥಾನಗಳಾದರೂ ಆಗಿರಲಿ. ಅದು ಜನಾದೇಶ. ಆ ವಿಚಾರದಲ್ಲಿ ಮೂದಲಿಕೆ ಮಾಡುವ ಸಿದ್ದರಾಮಯ್ಯ ಅವರಿಗೆ ಜನರ ಆಶಯ, ಅಭಿಪ್ರಾಯಗಳನ್ನು ಒಪ್ಪುವಂಥ ಮನಸ್ಥಿತಿಯೇ ಇಲ್ಲ ಎಂದು ಹೇಳಿದ್ದಾರೆ.
ಜೆಡಿಎಸ್ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ ಎಂದಿದ್ದಾರೆ.
ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ. ಇನ್ನೆಂದು ಜೆಡಿಎಸ್‌ನ ಸ್ಥಾನ ಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದು ಹೇಳಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…