Featured

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನ ವಿಜಯೇಂದ್ರಗೆ ಕೊಡಿ , ನಾನು ರಾಜ್ಯಾಧ್ಯಕ್ಷನಾಗುತ್ತೇನೆ : ಯತ್ನಾಳ್ – vishwanews24

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ತಮ್ಮ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ನಡೆಯುತ್ತಿದೆ : ಯತ್ನಾಳ್ 

ವಿಜಯಪುರ: ಬಿ. ವೈ. ವಿಜಯೇಂದ್ರ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಮಾಡಿಸಲು ಪ್ರಯತ್ನಗಳು ನಡೆಯುತ್ತಿವೆ.ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವುದಾಗಿ ಹೇಳಿದ್ದೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ನಗರದಲ್ಲಿ ವಿಶ್ವ ಯೋಗದ ದಿನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಇತ್ತೀಚೆಗೆ ಬಿಜೆಪಿ ಶಾಸಕ ಎನ್. ರವಿಕುಮಾರ ಮತ್ತಿತರರು ವಿಜಯಪುರದಲ್ಲಿ ಶಾಸಕ ಯತ್ನಾಳ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬಿ. ವೈ. ವಿಜಯೇಂದ್ರ ಮತ್ತು ಯತ್ನಾಳ ಮಧ್ಯೆ ಹೊಂದಾಣಿಕೆ ಮಾಡಿಸುವ ಕುರಿತು ಮಾತುಕತೆಗಳು ನಡೆದಿವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಕುರಿತು ಕೇಳಲಾದ ಪ್ರಶ್ನಗೆ ಉತ್ತರಿಸಿದ ಯತ್ನಾಳ, ಅಂಥ ಪ್ರಯತ್ನಗಳು ನಡೆಯುತ್ತವೆ. ನಾನು ಕಾಂಪಿಟೇಟರ್ ಇದ್ದೇನೆ ಎಂದು ಹೇಳಿದರು.

ತಮಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವುದಾಗಿ ಹೇಳಿದ್ದಾರೆ. ಆದರೆ ನಾನು ವಿಜಯೆಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago