Featured

ರಾಷ್ಟ್ರೀಯ ರೈತ ದಿನಾಚರಣೆ : ನಮ್ಮ ಕಾಂಗ್ರೆಸ್‌ ಹಿಂದೆಯೂ ಇಂದು ಮತ್ತು ಮುಂದೆಯೂ ಸದಾ ರೈತರ ಪರ : ಸಿದ್ದರಾಮಯ್ಯ -Vishwanews24

ರಾಷ್ಟ್ರೀಯ ರೈತ ದಿನಾಚರಣೆ : ನಮ್ಮ ಕಾಂಗ್ರೆಸ್‌ ಹಿಂದೆಯೂ ಇಂದು ಮತ್ತು ಮುಂದೆಯೂ ಸದಾ ರೈತರ ಪರ : ಸಿದ್ದರಾಮಯ್ಯ -Vishwanews24

 

ಬೆಂಗಳೂರು,  : ಬುಧವಾರ ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು ಹಲವು ನಾಯಕರು ರೈತರಿಗೆ ಶುಭಾಶಯ ತಿಳಿಸಿದ್ದಾರೆ. ಈ ನಡುವೆ ಕಳೆದ 28 ದಿನಗಳಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಲ್ಲೇ ಇದ್ದಾರೆ. ಕೇಂದ್ರ ಹಾಗೂ ರೈತ ಮುಖಂಡರುಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿದೆ.

ಇನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ರೈತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದು ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ” ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯನವರು, ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ. ನಮ್ಮ ಕಾಂಗ್ರೆಸ್‌ ಹಿಂದೆಯೂ ಇಂದು ಮತ್ತು ಮುಂದೆಯೂ ಸದಾ ರೈತರ ಪರ. ಅನ್ನ ತಿನ್ನುವ ನಾವೆಲ್ಲರೂ ಕೃಷಿ ವಿರೋಧಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಗೆ ನಮ್ಮ ದನಿ ಸೇರಿಸೋಣ” ಎಂದು ಕರೆ ನೀಡಿದ್ದಾರೆ.

ಹಾಗೆಯೇ, ”ಅನ್ನದಾತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯಗಳು” ಎಂದು ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

4 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

4 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

5 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

5 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

6 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

6 hours ago