ಬೆಂಗಳೂರು, : ಬುಧವಾರ ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು ಹಲವು ನಾಯಕರು ರೈತರಿಗೆ ಶುಭಾಶಯ ತಿಳಿಸಿದ್ದಾರೆ. ಈ ನಡುವೆ ಕಳೆದ 28 ದಿನಗಳಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಲ್ಲೇ ಇದ್ದಾರೆ. ಕೇಂದ್ರ ಹಾಗೂ ರೈತ ಮುಖಂಡರುಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿದೆ.
ಇನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ರೈತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದು ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ” ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ. ನಮ್ಮ ಕಾಂಗ್ರೆಸ್ ಹಿಂದೆಯೂ ಇಂದು ಮತ್ತು ಮುಂದೆಯೂ ಸದಾ ರೈತರ ಪರ. ಅನ್ನ ತಿನ್ನುವ ನಾವೆಲ್ಲರೂ ಕೃಷಿ ವಿರೋಧಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಗೆ ನಮ್ಮ ದನಿ ಸೇರಿಸೋಣ” ಎಂದು ಕರೆ ನೀಡಿದ್ದಾರೆ.
ಹಾಗೆಯೇ, ”ಅನ್ನದಾತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯಗಳು” ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…