Featured

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ : ಬೆಳ್ತಂಗಡಿಯ ಯಾಕೂಬ್ ಸೇರಿ ರಾಜ್ಯದ ಮೂರು ಶಿಕ್ಷಕರು ಆಯ್ಕೆ -Vishwanews24

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ : ಬೆಳ್ತಂಗಡಿಯ ಯಾಕೂಬ್ ಸೇರಿ ರಾಜ್ಯದ ಮೂರು ಶಿಕ್ಷಕರು ಆಯ್ಕೆ -Vishwanews24

ಬೆಳ್ತಂಗಡಿ: ಬೆಳ್ತಂಗಡಿಯ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್‌‌‌ ಎಸ್‌ ಸೇರಿದಂತೆ ರಾಜ್ಯದ ಮೂವರು ಶಿಕ್ಷಕರನ್ನು ಕೇಂದ್ರ ಶಿಕ್ಷಣ ಸಚಿವಾಲಯವು ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಕಲಬುರ್ಗಿ ಜಿಲ್ಲೆಯ ಅಫ್ಜಲ್‌‌‌ಪುರ ಸರ್ಕಾರಿ ಪ್ರೌಢಸಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್‌‌ ಹಾಗೂ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್‌‌‌ ಷಣ್ಮುಖಂ ಅವರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಗೆ ದೇಶಾದ್ಯಂತ ಒಟ್ಟು 47 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಯಾಕುಬ್ ಅವರು ಶಿಕ್ಷಕರಾಗಿರುವ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗಣಿತವನ್ನು ಸುಲಭವಾಗಿ ಕಲಿಯುವ ನಿಟ್ಟಿನಲ್ಲಿ ಸ್ಥಳೀಯರ ಸಹಾಯದಿಂದ ಗಣಿತ ಪ್ರಯೋಗಾಲಯವನ್ನು ಪ್ರಾರಂಭಿಸಿದ್ದು, ಶಿಕ್ಷಣ ಇಲಾಖೆಯ ಗಮನ ಸೆಳೆದಿದ್ದರು. ಯಾಕೂಬ್‌ ಅವರು ಮಾಡಿರುವ ಈ ಕಾರ್ಯ ರಾಜ್ಯಾದ್ಯಂತ ಗಮನ ಸೆಳೆದಿದ್ದು, ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನೂ ನೀಡಲಾಯಿತು.

1996 ರಲ್ಲಿ ಯಾಕೂಬ್‌ ಅವರು ತಮ್ಮ ಬೋಧನಾ ವೃತ್ತಿಯನ್ನು ಪ್ರಾರಂಭಿಸಿದರು. ಅಂದಿನಿಂದ ಅವರು ಬೋಧಿಸುತ್ತಿರುವ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಯಾಕೂಬ್‌‌ ಅವರು ಮಾಡಿದ ಸರಳ ಗಣಿತ ಬೋಧನೆಯ 300 ಕ್ಕೂ ಹೆಚ್ಚು ವೀಡಿಯೊಗಳು ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಯಾಕೂಬ್ ಅವರು ಕೊಯ್ಯೂರು ಉನ್ನಲು ನಿವಾಸಿಗಳಾದ ಇಸುಬು ಬ್ಯಾರಿ ಮತ್ತು ಅಲಿಮ್ಮಮ್ಮ ದಂಪತಿಯ ಪುತ್ರ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮ್ಮ ಊರಿನ ಶಾಲೆಯಲ್ಲಿ ಪೂರೈಸಿದರು. ನಂತರ ಇವರು ಮಂಗಳೂರಿನ ಸರ್ಕಾರಿ ಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದರು ಹಾಗೂ ನಡಾ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇವರು 2007 ರಿಂದ 2012 ರವರೆಗೆ ಅಕ್ಷರಾ ದಾಸೋಹಾ ಕಾರ್ಯಕ್ರಮದ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago