ಮುಂಬಯಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ಶನಿವಾರ (ಏಪ್ರಿಲ್10) ಆರ್ ಎಸ್ ಎಸ್ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ತಿಳಿಸಿದೆ.
ಮೋಹನ್ ಭಾಗವತ್ (70ವರ್ಷ) ಅವರಿಗೆ ಕೋವಿಡ್ ಸೋಂಕಿನ ಲಕ್ಷಣ ಕಂಡು ಬಂದಿರುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಟ್ವೀಟ್ ಮಾಡಿದೆ. ಭಾಗವತ್ ಗೆ ಕೋವಿಡ್ ಸೋಂಕು ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ನಾಗ್ಪುರದ ಕಿಂಗ್ಸ್ ವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿವರಿಸಿದೆ.
ಆಸ್ಪತ್ರೆಯಲ್ಲಿ ಭಾಗವತ್ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು, ಹಿರಿಯ ವೈದ್ಯರು ನಿಗಾ ವಹಿಸುತ್ತಿರುವುದಾಗಿ ಆರ್ ಎಸ್ ಎಸ್ ಟ್ವೀಟ್ ನಲ್ಲಿ ಹೇಳಿದೆ. ಮಾರ್ಚ್ 07ರಂದು ಭಾಗವತ್ ಮೊದಲ ಕೋವಿಡ್ ಲಸಿಕೆಯನ್ನು ಪಡೆದಿದ್ದರು.
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ 19 ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಇದೀಗ ಎರಡನೇ ಕೋವಿಡ್ ಅಲೆ ಮತ್ತೆ ಕಾಣಿಸಿಕೊಂಡಿದೆ.
ಮಂಗಳೂರು: ತಂದೆಯಿಂದ ಅಪ್ರಾಪ್ತ ಪುತ್ರಿ ಮೇಲೆ ಅತ್ಯಾಚಾರ – ಆರೋಪಿಯ ಬಂಧನ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…