Featured

ರಾಷ್ಟ್ರೀಯ  ಹೆದ್ದಾರಿಯಲ್ಲಿನ ಸಮಸ್ಯೆಗಳನ್ನು 10 ದಿನದ ಒಳಗೆ ಸರಿಪಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ರಾಷ್ಟ್ರೀಯ  ಹೆದ್ದಾರಿಯಲ್ಲಿನ ಸಮಸ್ಯೆಗಳನ್ನು 10 ದಿನದ ಒಳಗೆ ಸರಿಪಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ : ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ  ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ ಎಲ್ಲಾ ಸಮಸ್ಯೆಗಳನ್ನು 10 ದಿನದ ಒಳಗೆ ಸಂಪೂರ್ಣವಾಗಿ ಬಗೆ ಹರಿಸಿ, ಈ ಸಮಸ್ಯೆಗಳನ್ನು ಸರಿಪಡಿಸಿದ ದಿನಾಂಕ ಮತ್ತು ಸಮಯವನ್ನು ಒಳಗೊಂಡ ಕುರಿತು ಛಾಯಾಚಿತ್ರಗಳು ಹಾಗೂ ವರದಿಯನ್ನು ಸಲ್ಲಿಸಿ, ಮುಂದಿನ ಸಭೆಗೆ ಹಾಗೂ ಜಿಲ್ಲಾಡಳಿತ ಸೂಚಿಸುವ ಎಲ್ಲಾ ಸಭೆಗಳಿಗೆ ಕಡ್ಡಾಯವಾಗಿ ಹಾಜರಿರುವಂತೆ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ  ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತೊಂದರೆ ಇರುವ ಅಡೆತಡೆಗಳನ್ನು ತಕ್ಷಣವೇ ಸರಿಪಡಿಸಬೇಕು. ತುರ್ತು ಅಗತ್ಯವಿರುವೆಡೆಗಳಲ್ಲಿ ತಕ್ಷಣವೇ ಬೀದಿ ದೀಪಗಳನ್ನು ಅಳವಡಿಸಬೇಕು. ಹೆದ್ದಾರಿ ಪಕ್ಕದಲ್ಲಿ ನೀರು ಹರಿಸಲು ಮತ್ತು ಸಂಚಾರಕ್ಕೆ ತಡೆ ಉಂಟು ಮಾಡುವ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು. ಪ್ಲೆöÊ ಓವರ್‌ಗಳ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ಸಂಭವಿಸಿದ್ದಲ್ಲಿ ಸಂಬAಧಪಟ್ಟ ಹೆದ್ದಾರಿಯ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ದಾಖಲಿಸಿ ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಬೇಕು. ಇದಕ್ಕಾಗಿ ದೂರು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಅದರಲ್ಲಿ ದೂರುಗಳಿಗೆ ಸಂಬAಧಪಟ್ಟ ಎಲ್ಲಾ ವಿವರಗಳನ್ನು ದಾಖಲಿಸಬೇಕು. ನಿಗಧಿತ ಅವಧಿಯೊಳಗೆ ಸಮಸ್ಯೆಗಳನ್ನು ಬಗೆಹರಿಸದ ಸಿಬ್ಬಂದಿಗಳ ವೇತನ ಮತ್ತು ಭತ್ಯೆಗಳನ್ನು ತಡೆ ಹಿಡಿಯುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಹೆದ್ದಾರಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಜಿಲ್ಲಾಡಳಿತ ಸೂಚಿಸುವ ಕಾಲಮಿತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು. ಕುಂದಾಪುರದ ಸಂಗ ಜಂಕ್ಷನ್‌ನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಹರಿದುಹೋಗಲು ವ್ಯವಸ್ಥೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಬೀದಿ ದೀಪದ ವ್ಯವಸ್ಥೆ ಮಾಡಬೇಕು. ಸಾಲಿಗ್ರಾಮ ಬಳಿಯ ಸರ್ವಿಸ್ ರಸ್ತೆ ಕಾಮಗಾರಿ ಸೇರಿದಂತೆ ಬಾಕಿ ಇರುವ ಎಲ್ಲಾ ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಮಳೆ ನಿಂತ ಕೂಡಲೇ ರಾಷ್ಟಿçÃಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ ಕೈಗೊಂಡಿರುವ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗಳಿಗೆ ರೈಲ್ವೆ ಮತ್ತು ರಾಷ್ಟಿçÃಯ ಹೆದ್ದಾರಿ ಇಲಾಖೆಗಳಿಂದ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನವಯುಗ ಮತ್ತು ಐಆರ್‌ಬಿ ಯ ಇಂಜನಿಯರ್ ಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago