ಕಾಪು: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ / ನಿವೃತ್ತ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕಾಪು ಪುರಸಭಾ ಚುನಾವಣೆಯ ಪ್ರಯುಕ್ತ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿ ಮಾದರಿಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುತ್ತಿದ್ದು ಎಲ್ಲಾ ಪಕ್ಷಗಳಿಗೂ ಪರ್ಯಾಯವಾಗಿ ಅಲ್ಲಿ ಬಿಜೆಪಿಬೆಳೆಯುತ್ತಿದೆ. ಅಲ್ಲಿನ ಹಲವು ಮಂದಿ ಐಎಎಸ್, ಐಪಿಎಸ್ಅಧಿಕಾರಿಗಳ ಸಹಿತವಾಗಿ ವಿವಿಧ ಅಧಿಕಾರಿಗಳು ಮತ್ತು ಮಾಜಿ ಶಾಸಕ,ಸಂಸದರ ಸಹಿತವಾಗಿ ನೂರಾರು ಮಂದಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ಐಪಿಎಸ್ ವೃತ್ತಿಗೆ ರಾಜೀನಾಮೆ ನೀಡಿದ ರಾಷ್ಟ್ರೀಯತೆಯ ಬಗ್ಗೆ ಒಲವು ತೋರಿಸಿ ಬಿಜೆಪಿಗೆ ಸೇರಿದ್ದು, ರಾಷ್ಟ್ರೀ ಯತೆಯನ್ನು ಉಳಿಸ,ಬೆಳೆಸಲು ಬಿಜೆಪಿಯಿಂದ ಮಾತ್ರಾ ಸಾಧ್ಯ. ಬಿಜೆಪಿಯಲ್ಲಿ ಮಾತ್ರಾ ಸಂಘಟನಾತ್ಮಕ ವಿಚಾರಗಳು, ಹೊಸ ನಾಯಕರ ಸೃಷ್ಠಿ ಮತ್ತುಯುವಕರ ಬೆಂಬಲ ಪಡೆಯಲು ಸಾಧ್ಯವಿದೆ. ಅದಕ್ಕೇ ಅನುಗುಣವಾಗಿ ನರೇಂದ್ರ ಮೋದಿಯವರ ನೇತೃತ್ವವೂ ಬಿಜೆಪಿಗೆ ವಿಶೇಷಬಲವನ್ನು ತುಂಬಿದೆ. ಎಲ್ಲರೂ ಜೊತೆಗೂಡಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸೋಣ ಎಂದರು.
ಕೇAದ್ರ ಮತ್ತು ರಾಜ್ಯದಲ್ಲಿ ಡಬ್ಬಲ್ ಇಂಜಿನ್ ಮೋಡ್ನಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದಲ್ಲಿದ್ದು ಎರಡೂ ಸರಕಾರಕ್ಕೆ ಮತ್ತಷ್ಟುಬಲ ಬರಬೇಕಾದರೆ ಹಳ್ಳಿ ಹಳ್ಳಿಗಳಲ್ಲೂ ಬಿಜೆಪಿಗೆ ಅಧಿಕಾರ ದೊರಕಬೇಕಿದೆ. ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಕಡೆಗಳಲ್ಲೂ ಬಿಜೆಪಿ ಆಡಳಿವಿದ್ದು, ಕಾಪು ಪುರಸಭೆಯಲ್ಲೂ ಬಿಜೆಪಿಗೆ ಅಧಿಕಾರ ದೊರಕಬೇಕಿದೆ. ಅಭ್ಯರ್ಥಿಗಳು ಯಾರೇ ಇರಲಿ, ಪಕ್ಷದ ಗೆಲುವೊಂದೇ ನಮ್ಮ
ಗುರಿ ಎಂಬ ಧ್ಯೇ ಯದೊಂದಿಗೆ ಕಾರ್ಯಕರ್ತರು ಹಗಲಿರುಳು ಶ್ರಮ ವಹಿಸಿ, ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…