Featured

ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ನಿಧನ -Vishwanews24

ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ನಿಧನ -Vishwanews24

ನವದೆಹಲಿ: ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ಶುಕ್ರವಾರ ನಸುಕಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಮೆದುಳಿಗೆ ಎರಡನೇ ಬಾರಿ ಪಾರ್ಶ್ವವಾಯು(ಬ್ರೈನ್ ಸ್ಟ್ರೋಕ್) ಆದ ನಂತರ ಸುರೇಖಾ ಸಿಕ್ರಿ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಇಂದು ಬೆಳಗ್ಗೆ ತೀವ್ರ ಹೃದಯಾಘಾತವಾಗಿ ಅಸುನೀಗಿದ್ದಾರೆ ಎಂದು ಅವರ ಸಹಾಯಕ ವಿವೇಕ್ ಸಿದ್ವಾನಿ ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಕೂಡ ಸುರೇಖಾ ಸಿಕ್ರಿಯವರಿಗೆ ಬ್ರೈನ್ ಸ್ಟ್ರೋಕ್ ಆಗಿತ್ತು. ತಮ್ಮ ಆರೋಗ್ಯ ಸಂಪೂರ್ಣ ಗುಣಮುಖವಾಗುವವರೆಗೆ ನಟನೆಗೆ ಹಿಂತಿರುಗಲು ಸಾಧ್ಯವಿಲ್ಲ ಎಂದು ಕಳೆದ ವರ್ಷ ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಇಂದು ಅವರ ನಿವಾಸದ ಹತ್ತಿರ ಕುಟುಂಬಸ್ಥರು ಮತ್ತು ಆಪ್ತರು ನೆರೆದಿದ್ದು ಕುಟುಂಬಸ್ಥರು ಖಾಸಗಿತನ ಅಪೇಕ್ಷಿಸುತ್ತಿದ್ದಾರೆ ಎಂದು ಅವರ ಸಹಾಯಕ ವಿವೇಕ್ ಸಿದ್ವಾನಿ ತಿಳಿಸಿದ್ದಾರೆ.

ಮೂರು ಬಾರಿ ರಾಷ್ಟ್ರ ಪ್ರಶಸ್ತಿ: ಸುರೇಖಾ ಸಿಕ್ರಿ ಅವರಿಗೆ ಕಳೆದ ವರ್ಷ ಬಡಾಯಿ ಹೊ ಚಿತ್ರಕ್ಕೆ ಉತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಗಳಿಸಿದ್ದರು. 1988ರಲ್ಲಿ ತಮಾಸ್ ಹಾಗೂ 1995ರಲ್ಲಿ ಮಮ್ಮೊ ಚಿತ್ರಕ್ಕೆ ಸಹ ರಾಷ್ಟ್ರಪ್ರಶಸ್ತಿ ಗಳಿಸಿದ್ದರು. ರಾಷ್ಟ್ರೀಯ ನಾಟಕ ಅಕಾಡೆಮಿಯಲ್ಲಿ ಪದವಿ ಗಳಿಸಿದ್ದ ಸುರೇಖಾ ಸಿಕ್ರಿ ಅವರಿಗೆ 1989ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಕೂಡ ಬಂದಿತ್ತು.

ಹಿಂದಿ ಧಾರಾವಾಹಿ ಲೋಕದ ಜನಪ್ರಿಯ ಧಾರಾವಾಹಿ ‘ಬಾಲಿಕ ವಧು’ ಮೂಲಕ ಕಿರುತೆರೆಯಲ್ಲಿ ಕೂಡ ಸುರೇಖಾ ಸಿಕ್ರಿ ಜನಪ್ರಿಯರಾಗಿದ್ದರು. ಇನ್ನು ಹಿರಿತೆರೆಯಲ್ಲಿ ಜುಬೇಡಾ, ಮಿ ಅಂಡ್ ಮಿಸ್ಸಸ್ ಅಯ್ಯರ್ ಮತ್ತು ರೈನ್ ಕೋಟ್ ಚಿತ್ರಗಳಲ್ಲಿ ಕೂಡ ಅವರ ನಟನೆ ಅತ್ಯಂತ ಜನಪ್ರಿಯವಾಗಿತ್ತು. ‘ಏಕ್ ಥಾ ರಾಜ ಏಕ್ ಥಿ ರಾಣಿ’, ‘ಪಾರ್ಡೆಸ್ ಮೇ ಹೈ ಮೇರಾ ದಿಲ್’, ‘ಮಾ ಎಕ್ಸ್ ಚೇಂಜ್’, ‘ಸಾತ್ ಪೆರೆ’ ಮತ್ತು ‘ಬಾಲಿಕಾ ವಧು’ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಅವರು ಕೊನೆಯದಾಗಿ ನಟಿಸಿದ ಚಿತ್ರ ಘೋಸ್ಟ್ ಸ್ಟೋರೀಸ್ ಜೋಯಾ ಅಖ್ತರ್ ನಿರ್ದೇಶಿಸಿದ್ದು ನೆಟ್ಲ್ಫಿಕ್ಸ್ ನಲ್ಲಿ ಪ್ರಸಾರವಾಗಿತ್ತು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

3 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago