ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಚಳಿ ; 15 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು -Vishwanews24
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಚಳಿ ; 15 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು -Vishwanews24
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ತೀವ್ರಗೊಂಡಿದ್ದು, ಹೊಸ ವರ್ಷದ ಮೊದಲ ದಿನವೇ 15 ವರ್ಷಗಳಲ್ಲೇ ಕನಿಷ್ಠ ತಾಪಮಾನ ವರದಿಯಾಗಿದ್ದು, ಶುಕ್ರವಾರ 1.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
2006ರ ಜನವರಿ 8ರಂದು ದೆಹಲಿಯಲ್ಲಿ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈವರೆಗಿನ ಅತಿ ಕನಿಷ್ಠ ತಾಪಮಾನ 0.6 ಡಿಗ್ರಿ ಸೆಲ್ಸಿಯಸ್ 1935ರ ಜನವರಿಯಲ್ಲಿ ದಾಖಲಾಗಿತ್ತು.
>ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.
https://bit.ly/2WXhnp4
>ಹೊಸ ವರ್ಷಾಚರಣೆಯ ಸಂಭ್ರಮ: ಮಣಿಪಾಲದಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರಿಂದ ಲಾಠಿ ರುಚಿ
https://bit.ly/3o9VA9G
ಕಳೆದ ವರ್ಷ 2.4 ಡಿಗ್ರಿ ಸೆಲ್ಸಿಯಸ್ ಅತಿ ಕಡಿಮೆ ತಾಪಮಾನ ವರದಿಯಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.ಜನವರಿ 2ರಿಂದ 6ರ ಅವಧಿಯಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಜನವರಿ 4-5ರ ವೇಳೆಗೆ ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್ಗೆ ತಲುಪಬಹುದು ಎಂದೂ ಅವರು ಹೇಳಿದ್ದಾರೆ.
2020ರ ಜನವರಿಯಲ್ಲಿ 2.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ವಿವರಿಸಿದೆ. ಈ ವರ್ಷವೂ ರಕ್ತ ಹೆಪ್ಪುಗಟ್ಟಿಸುವ ಚಳಿಗೆ ದೆಹಲಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ತಿಳಿಸಿದೆ.
