ರಾಸಲೀಲೆ ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರರಾವ್ ಅಮಾನತು – vishwanews24

Featured, ರಾಜ್ಯ ನ್ಯೂಸ್

ರಾಸಲೀಲೆ ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರರಾವ್ ಅಮಾನತು

ಬೆಂಗಳೂರು :  ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.

ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್​ ಕೋಚ್​ ಬಸ್ ಲಾರಿಗೆ ಡಿಕ್ಕಿ, ಓರ್ವ ಸಾವು, 11 ಮಂದಿಗೆ ಗಾಯ – vishwanews24

ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್​​ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್​ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್​ ಚಿನ್ನ ಕಳ್ಳಸಾಗಾಣಿಕೆ ಕೇಸ್​​ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್​​ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ. ಈ ನಡುವೆ ರಾಸಲೀಲೆಯ ವಿಡಿಯೋ ವೈರಲ್‌ ಆಗಿದರೋದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ.

Leave a Reply