ಬೆಂಗಳೂರು : ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ. ಈ ನಡುವೆ ರಾಸಲೀಲೆಯ ವಿಡಿಯೋ ವೈರಲ್ ಆಗಿದರೋದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…