ರಾಹುಲ್ ಗಾಂಧಿಗೆ ಒಂದು ಅವಕಾಶ ನೀಡಿ, ಅವರು ಅಧಿಕಾರಕ್ಕೆ ಬಂದರೆ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ : ಶತ್ರುಘ್ನ ಸಿನ್ಹಾ -Vishwanews24
ಪಾಟ್ನಾ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ ಭರವಸೆಗಳನ್ನು ಈಡೇರಿಸುತ್ತಾರೆ. ಅವರಿಗೂ ಒಂದುಅವಕಾಶ ಕೊಡಿ ಎಂದು ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಮತದಾರರಿಗೆ ಮನವಿ ಮಾಡಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ರೈತರ ಸಾಲಮನ್ನಾ ಮಾಡುತ್ತಾರೆ. ನ್ಯಾಯ ಯೋಜನೆಯಿಂದ 25 ಕೋಟಿ ಜನರಿಗೆ ಅನುಕೂಲವಾಗಲಿದೆ. ಅವರು ಅಧಿಕಾರಕ್ಕೆ ಬಂದರೆ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ತಿಳಿಸಿದರು.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ನಯಕರು ತಮ್ಮ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದರು. ಇತ್ತ ಕಾಂಗ್ರೆಸ್‍ನಿಂದಲೂ ವಿಶೇಷ ಆಹ್ವಾನ ಬಂದಿತ್ತು. ಹೀಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಶತ್ರುಘ್ನ ಸಿನ್ಹಾಹೇಳಿದರು.
ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, ಕಳೆದ ಬಾರಿಯ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ಬೆಲೆ ಕಡಿಮೆ ಮಾಡುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
