ಮೈಸೂರು,: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಬಂದ ಈಶ್ವರ ಖಂಡ್ರೆ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯೇ ಮುಂದಿನ ಪ್ರಧಾನ ಮಂತ್ರಿ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರುತ್ತದೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಅದರಲ್ಲಿ ಯಾವುದೇ ಅನುಮಾನಬೇಡ ಎಂದು ವಿಶ್ವಾಸವ್ಯಕ್ತಪಡಿಸಿದರು. ನಮ್ಮ ಪಕ್ಷದ ಅಧ್ಯಕ್ಷರು ನನ್ನ ಮೇಲೆ ನಂಬಿಕೆ ಇಟ್ಟು, ಈ ಸ್ಥಾನ ನೀಡಿದ್ದಾರೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತೇನೆ.
ದುಷ್ಟ ಶಕ್ತಿಗಳ ಕಣ್ಣು ನಮ್ಮ ಪಕ್ಷದ ಮೇಲೆ ಬೀಳಬಾರದೆಂದು ಬೆಟ್ಟಕ್ಕೆ ಬಂದಿದ್ದು, ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…