ಬೆಂಗಳೂರು : ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ, ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಂದೊಮ್ಮೆ ದೇಶದ ಪ್ರಧಾನಿಯಾದರೆ ನಾನು ಅವರ ಪಕ್ಕದಲ್ಲೇ ಕೂತು ಸಕ್ರಿಯ ರಾಜಕಾರಣದಲ್ಲಿ ನಿರತನಾಗಿರುತ್ತೇನೆ ಎಂದು ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಮೂರು ವರ್ಷಗಳ ಹಿಂದೆ ನಾನಿನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಈಗ ಬದಲಾದ ಪರಿಸ್ಥಿತಿ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಬಲವಂತಪಡಿಸಿದೆ ಎಂದವರು ಹೇಳಿದರು.
ನಾನೇನೂ ಮುಚ್ಚಿಡಲು ಬಯಸುವುದಿಲ್ಲ; ನನಗೆ ಯಾವುದೇ ಮಹಾತ್ವಾಕಾಂಕ್ಷೆ ಇಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಹಿಂದೆಯೂ ಅನೇಕ ಬಾರಿ ಹೇಳಿದ್ದೆ. ಈಗ ಮತ್ತೆ ಅದನ್ನೇ ಹೇಳುತ್ತಿದ್ದೇನೆ ಎಂದು ಗೌಡ ಹೇಳಿದರು.
ಒಂದೊಮ್ಮೆ ರಾಹುಲ್ ಗಾಂಧಿ ಪ್ರಧಾನಿ ಯಾದರೆ ನಾನು ಅವರ ಪಕ್ಷದಲ್ಲೇ ಕೂತಿರುತ್ತೇನೆ. ಮತ್ತೆ ನಾನು ಪ್ರಧಾನಿಯಾಗುವ ಅಗತ್ಯವೇನೂ ಇಲ್ಲ ಎಂದು ಗೌಡ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…