Featured

ರಾಹುಲ್‌ ಪ್ರಧಾನಿಯಾದರೆ ಶ್ರೀಕೃಷ್ಣನಂತೆ ರಾಷ್ಟ್ರವನ್ನು ಸಾಮರಸ್ಯದಿಂದ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಾರೆ..:ವೀರಪ್ಪಮೊಯ್ಲಿ -Vishwanews24

ನೆಲಮಂಗಲ: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಪ್ರಧಾನಿಯಾದರೆ ಶ್ರೀಕೃಷ್ಣನಂತೆ ರಾಷ್ಟ್ರವನ್ನು ಸಾಮರಸ್ಯದಿಂದ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡ.ಎಂ.ವೀರಪ್ಪಮೊಯ್ಲಿ ತಿಳಿಸಿದರು.
ಪಟ್ಟಣದ ಸಮೀಪದಲ್ಲಿರುವ ಯಲಹಂಕ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಕಿತ್ತನಹಳ್ಳಿ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಚುನಾವಣೆ ಪ್ರಚಾರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಬಡವರ ಉದ್ಧಾರ ಆಗಬೇಕೆಂದರೆ ಕಾಂಗ್ರೆಸ್‌ಗೆ ಮತ ನೀಡಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿದರೆ ಬಡವರಿಗೆ ಅನುಕೂಲ ವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬಡ ಜನರ ಪರ ಕೆಲಸ ಮಾಡುತ್ತಿಲ್ಲ, ಅವರು ಶ್ರೀಮಂತರ ಪರ ಕೆಲಸ ಮಾಡುತ್ತಿದ್ದಾರೆ. ಈ ದಿನ ನರೇಂದ್ರ ಮೋದಿಯವರ ಸರ್ಕಾರದಿಂದ ಎಲ್ಲಾ ರೀತಿಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಪ್ರಧಾನಿ ಮೋದಿ ಶಿಶುಪಾಲನಿದ್ದಂತೆ ರಾಹುಲ್‌ ಗಾಂಧಿ ಶ್ರೀಕೃಷ್ಣನಿದ್ದಂತೆ, ಹದಿನೆಂಟಕ್ಕೆ ಶಿಶುಪಾಲನ ಅಂತ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್‌ಸದಸ್ಯ ನಾರಾಯಣಸ್ವಾಮಿ, ವಿಧಾನಪರಿಷತ್‌ ಮಾಜಿಸದಸ್ಯ ಇ.ಕೃಷ್ಣಪ್ಪ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ರವಿಕುಮಾರ್‌, ಚೊಕ್ಕನಹಳ್ಳಿ ವೆಂಕಟೇಶ್‌, ಚಂದ್ರಪ್ಪ, ಜೆಡಿಎಸ್‌ ಮುಖಂಡ ಎನ್‌.ಕೃಷ್ಣಪ್ಪ, ಜಿ.ಶಿವಕುಮಾರ್‌, ಕಾಂಗ್ರೆಸ್‌ ಮುಖಂಡ ಲಕ್ಷ್ಮಣಮೂರ್ತಿ, ಕೇಶವಮೂರ್ತಿ, ದಿಲೀಪ್‌ಕುಮಾರ್‌ ಮತ್ತಿತರರಿದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago