ಮೋದಿ ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಅವರಿಗೆ ಬಹುಮತ ಬರಲಿಲ್ಲ. ಎನ್‍ಡಿಎ ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು ಎಂದು ಸಿದ್ದರಾಮಯ್ಯ ಅವರು ನುಡಿದರು.
ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಮತ ಯಾಚನೆ ಮಾಡಿದರು. ಆದರೆ, ರಾಮ ಮಂದಿರ ನಿರ್ಮಾಣವಾಗಿರುವ ಅಯೋಧ್ಯೆಯಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಇದು ಬಿಜೆಪಿಯ ಸೋಲು ಎಂದು ಸಿದ್ದರಾಮಯ್ಯ ಹೇಳಿದರು.
ರಾಹುಲ್ ಗಾಂಧಿ ನಡೆಸಿದಂತಹ ಭಾರತ್ ಜೋಡೋ ಯಾತ್ರೆ, ನ್ಯಾಯ ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿ ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿ ಕೈ ಹಿಡಿದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…