ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ.
ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ( ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ರಾಹುಲ್ ಗಾಂಧಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರೋದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಸಿರ್ಸಿ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವ್ಯಾಪಕ ಸ್ವರೂಪ ಪಡೆಯುತ್ತಿದ್ದಂತೇ, ಪೊಲೀಸರು ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಬಂಧಿಸಿದರು.
ಈ ಪ್ರತಿಭಟನೆಯ ವೇಳೆ ಮಾತನಾಡಿದಂತ ಶಾಸಕ ಜಮೀರ್ ಅಹ್ಮದ್ ಖಾನ್, ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿಯವರು ಚಿತ್ರಹಿಂಸೆ ನೀಡುತ್ತಿದ್ದಾರೆ. 2002ರಲ್ಲಿಯೇ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಆದ್ರೇ ಇದೇ ಪ್ರಕರಣವನ್ನು ರೀ ಓಪನ್ ಮಾಡಿ, ಬೇಕಂತಲೇ ವಿಚಾರಣೆ ನಡೆಸುತ್ತಿದೆ ಎಂದು ಕಿಡಿಕಾರಿದರು.
ಇಡಿ ಸತತ ಐದು ದಿನಗಳಿಂದ ನಮ್ಮ ನಾಯಕರನ್ನು ಬೇಕೆಂದೇ ವಿಚಾರಣೆ ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ನಡೆಸೋದಕ್ಕೆ ಇಷ್ಟು ದಿನ ಬೇಕಾ.? ಇದು ಉದ್ದೇಶ ಪೂರಿತ ಹುನ್ನಾರವಾಗಿದೆ. ಮುಂಬರುವ ಚುನಾವಣೆಯ ದೃಷ್ಠಿಯಿಂದ ಹೀಗೆ ಇಡಿ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದರು.
ದೇಶಾದ್ಯಂತ ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ರಾಹುಲ್ ಗಾಂಧಿಯವರಿಗೆ ಎಲ್ಲಿಯವರೆಗೆ ಕಿರುಕುಳ ನೀಡೋದು ನಿಲ್ಲಿಸೋದಿಲ್ಲವೇ ನಮ್ಮ ಹೋರಾಟಾ ಕೂಡ ನಿಲ್ಲೋದಿಲ್ಲ ಎಂಬುದಾಗಿ ತಿಳಿಸಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…