ಬೆಂಗಳೂರು: ಬಿಜೆಪಿ ನಾಯಕರು ಮತ್ತು ಬಿಜೆಪಿಗೆ ಬೆಂಬಲ ಕೊಟ್ಟಿರುವ ಪಕ್ಷದ ನಾಯಕರು ರಾಹುಲ್ ಗಾಂಧ ವಿರುದ್ಧ ಜೀವ ಬೆದರಿಕೆ ಹಾಕುತ್ತಿದ್ದು ಕೂಡಲೇ ಎಲ್ಲರನ್ನು ಬಂಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಇತ್ತೀಚೆಗೆ ರಾಹುಲ್ ಗಾಂಧಿ ಮೇಲೆ ಬಿಜೆಪಿಯವರು ಗಧಾಪ್ರಹಾರ ನಡೆಸುತ್ತಿದ್ದಾರೆ. ಟೀಕೆಗಳನ್ನು ಮಾತ್ರ ಮಾಡುತ್ತಿಲ್ಲ. ಸುಳ್ಳು ಆರೋಪ ಮಾತ್ರ ಮಾಡುತ್ತಿಲ್ಲ. ಅವರಿಗೆ ಕೊಲೆ ಬೆದರಿಕೆ ಆರೋಪ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಜನಪ್ರಿಯತೆ ಕುಗ್ಗಿಸಲು, ಅವರನ್ನ ಹಣಿಯಲು ಆರೋಪ ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ, ಗೊಡ್ಡು ಬೆದರಿಕೆಗಳಿಗೆ, ಕೊಲೆ ಬೆದರಿಕೆಗೆ ರಾಹುಲ್ ಗಾಂಧಿ ಹೆದರುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ರಾಹುಲ್ ಗಾಂಧಿ ಇಂದಿರಾಗಾಂಧಿ ಕುಟುಂಬದಿಂದ ಬಂದವರು. ದೇಶಕ್ಕಾಗಿ ಪ್ರಾಣ ತೆತ್ತವರು. ಅವರ ತಂದೆ ಕೂಡಾ ಬಾಂಬ್ ಸ್ಫೋಟದಲ್ಲಿ ಜೀವ ಕಳೆದುಕೊಂಡವರು. ಬಿಜೆಪಿ ನಾಯಕರು ಇತ್ತೀಚೆಗೆ ತಾರ್ವಿಂದರ್ ಸಿಂಗ್ ಮಾರ್ವ, ನೇರವಾಗಿ ರಾಹುಲ್ ಗಾಂಧಿಗೆ ನೀವು ಸರಿಯಾಗಿ ನಡೆದುಕೊಳ್ಳದೇ ಇದ್ದರೆ ಇಂದಿರಾಗಾಂಧಿಗೆ ಆದ ಗತಿಯೇ ನಿಮಗೂ ಆಗುತ್ತೆ ಎಂದು ಬೆದರಿಕೆ ಹಾಕಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರು ರವನೀತ್ ಬಿಟ್ಟು ಅವರು ರಾಹುಲ್ ಅವರಿಗೆ ನೀವು ಒಬ್ಬ ಭಯೋತ್ಪಾದಕ ಎಂದು ಕರೆದಿದ್ದಾರೆ. ಇದರ ಅರ್ಥ ಸಾರ್ವಜನಿಕರನ್ನ ಎತ್ತಿ ಕಟ್ಟೋದು. ಇಂತಹ ಪ್ರಚೋದನೆ ಮಾತು ಆಡಿ ರಾಹುಲ್ ವಿರುದ್ಧ ಜನರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…